ಡೈಲಿ ವಾರ್ತೆ: 08/ಫೆ. /2025

ದೆಹಲಿ ವಿಧಾನಸಭೆ ಚುನಾವಣೆ 2025ರ ಫಲಿತಾಂಶ| ಅರವಿಂದ್‌ ಕೇಜ್ರಿವಾಲ್‌ಗೆ ಸೋಲು

ನವದೆಹಲಿ: ನವದೆಹಲಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಮಾಜಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಅವರು ಬಿಜೆಪಿ ಅಭ್ಯರ್ಥಿ ಪರ್ವೇಶ್‌ ಸಾಹಿಬ್‌ ಸಿಂಗ್‌ ವಿರುದ್ಧ ಸೋಲು ಕಂಡಿದ್ದಾರೆ. ಈ ಮೂಲಕ ಸತತ 3ನೇ ಬಾರಿಗೆ ದೆಹಲಿ ಮುಖ್ಯಮಂತ್ರಿಯಾಗುವ ಕನಸು ನುಚ್ಚುನೂರಾಗಿದೆ.

ಕಳೆದ 2 ಚುನಾವಣೆಗಳಲ್ಲೂ ನವದೆಹಲಿ ಕ್ಷೇತ್ರದಿಂದಲೇ ಸ್ಪರ್ಧಿಸಿದ್ದ ಕೇಜ್ರಿವಾಲ್‌ ಸತತ 2 ಬಾರಿ ಸಿಎಂ ಆಗಿದ್ದರು. 3ನೇ ಬಾರಿಯೂ ಅದೇ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅವರು ಪರ್ವೇಶ್‌ ವಿರುದ್ಧ 3,000ಕ್ಕೂ ಅಧಿಕ ಮತಗಳ ಅಂತರದಿಂದ ಸೋಲು ಕಂಡಿದ್ದಾರೆ.