ಡೈಲಿ ವಾರ್ತೆ: 12/ಫೆ. /2025

ಕೋಟ| ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ದಾಟಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ – ಪ್ರಯಾಣಿಕರು ಪಾರು!

ಕೋಟ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ದಾಟಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದು ಪ್ರಯಾಣಿಕರು ಸಣ್ಣ ಪುಟ್ಟ ಗಾಯದೊಂದಿಗೆ ಪ್ರಾಣಪಾಯದಿಂದ ಪಾರಾದ ಘಟನೆ ಫೆ.12 ರಂದು ಬುಧವಾರ ಮಧ್ಯಾಹ್ನ ರಾಷ್ಟ್ರೀಯ ಹೆದ್ದಾರಿ 66ರ ಕೋಟ ಮಣೂರು ರಾಜಲಕ್ಷ್ಮಿ ಸಭಾ ಭವನ ಬಳಿ ಸಂಭವಿಸಿದೆ.

ಕುಂದಾಪುರದಿಂದ ಉಡುಪಿ ಕಡೆಗೆ ಚಲಾಯಿಸಿಕೊಂಡು ಬಂದ ಬ್ರೆಜ್ಜಾ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ದಾಟಿ ವಿರುದ್ದ ದಿಕ್ಕಿನಿಂದ ಬರುತ್ತಿದ್ದ(ಉಡುಪಿಯಿಂದ ಕುಂದಾಪುರ ಕಡೆ) ಹೋಗುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿ ರಭಸಕ್ಕೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್​ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಎರಡು ಕಾರುಗಳು ಜಖಂಗೊಂಡಿದೆ.

ಕೋಟ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲಿಸಿದ್ದಾರೆ.