

ಡೈಲಿ ವಾರ್ತೆ: 14/ಫೆ. /2025


ನುಗ್ಗೆ ಸೊಪ್ಪಿನ ಪುಡಿಯನ್ನು ಪ್ರತಿದಿನ ಹಾಲಿಗೆ ಒಂದು ಚಮಚ ಬೆರೆಸಿ ಕುಡಿದರೆ ಆರೋಗ್ಯಕ್ಕಾಗುವ ಪ್ರಯೋಜನಗಳು, ಇಲ್ಲಿದೆ ಮಾಹಿತಿ

ನುಗ್ಗೆ ಸೊಪ್ಪಿನ ಪುಡಿಯು ಅನೇಕ ರೀತಿಯ ಔಷಧೀಯ ಗುಣಗಳಿಂದ ಸಮೃದ್ಧವಾಗಿದೆ ಎಂದು ಹೇಳಲಾಗುತ್ತದೆ. ಅದರಲ್ಲಿಯೂ ಇದನ್ನು ವಿವಿಧ ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ನೀಡಲು ಬಳಸಲಾಗುತ್ತದೆ. ನುಗ್ಗೆಸೊಪ್ಪಿನ ಪುಡಿಯನ್ನು ಹಾಲಿನೊಂದಿಗೆ ಸೇರಿಸಿ ಕುಡಿಯುವುದರಿಂದ ಹಲವು ರೀತಿಯ ಪ್ರಯೋಜನಗಳನ್ನು ನೀಡುತ್ತದೆ.
ಇದು ಮೂಳೆಗಳನ್ನು ಬಲಪಡಿಸುತ್ತದೆ, ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ ಮತ್ತು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಅಲ್ಲದೆ ಮಧುಮೇಹ ರೋಗಿಗಳಿಗೂ ಪ್ರಯೋಜನಕಾರಿಯಾಗಿದೆ.
ಪ್ರತಿದಿನ ಹಾಲಿಗೆ ಒಂದು ಚಮಚ ಈ ಎಲೆಗಳ ಪುಡಿಯನ್ನು ಬೆರೆಸಿ ಕುಡಿದರೆ ಕೀಲು ನೋವು ಎಂದಿಗೂ ಬರುವುದಿಲ್ಲ.

ನುಗ್ಗೆಕಾಯಿ ಸೇರಿಸಿ ಮಾಡಿದ ಪದಾರ್ಥಗಳು ಬಹಳ ರುಚಿಯಾಗಿರುತ್ತವೆ. ಅದೇ ರೀತಿ ಅವುಗಳ ಎಲೆಗಳಿಂದಲೂ ಕೂಡ ನಾನಾ ರೀತಿಯ ಅಡುಗೆಗಳನ್ನು ಮಾಡುತ್ತಾರೆ ಇದು ಅನೇಕ ರೀತಿಯ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಆದರೆ ಆ ಎಲೆಗಳ ಪುಡಿಗಳಿಂದ ಹಲವಾರು ರೀತಿಯ ಆರೋಗ್ಯ ಪ್ರಯೋಜನಗಳಿವೆ.
ಆಯುರ್ವೇದದಲ್ಲಿ, ನುಗ್ಗೆ ಸೊಪ್ಪಿನ ಪುಡಿಯು ಅನೇಕ ರೀತಿಯ ಔಷಧೀಯ ಗುಣಗಳಿಂದ ಸಮೃದ್ಧವಾಗಿದೆ ಎಂದು ಹೇಳಲಾಗುತ್ತದೆ. ಇದನ್ನು ವಿವಿಧ ಆರೋಗ್ಯ ಸಮಸ್ಯೆಗಳಿಗೆ ಚಿಕಿತ್ಸೆ ನೀಡಲು ಬಳಸಲಾಗುತ್ತದೆ. ಇದರಲ್ಲಿ ಪ್ರೋಟೀನ್, ಕಬ್ಬಿಣ, ಕ್ಯಾಲ್ಸಿಯಂ, ಪೊಟ್ಯಾಸಿಯಮ್ ಮತ್ತು ಮೆಗ್ನೀಸಿಯಮ್ನ ಉತ್ತಮ ಮೂಲವಾಗಿದೆ. ಇದಲ್ಲದೆ, ಫೈಬರ್ ಮತ್ತು ಜೀವಸತ್ವಗಳು ಸಹ ಸಮೃದ್ಧವಾಗಿವೆ. ಅದರಲ್ಲಿಯೂ ಹಾಲಿನೊಂದಿಗೆ ನುಗ್ಗೆ ಸೊಪ್ಪಿನ ಪುಡಿಯನ್ನು ಸೇರಿಸಿ ಕುಡಿಯುವುದರಿಂದ ಊಹೆಗೂ ನಿಲುಕದಷ್ಟು ಪ್ರಯೋಜನಗಳನ್ನು ಪಡೆಯಬಹುದಾಗಿದೆ.

ಅನೇಕರು ನುಗ್ಗೆಯನ್ನು ಇಷ್ಟ ಪಟ್ಟು ತಿನ್ನುತ್ತಾರೆ, ಇನ್ನು ಕೆಲವರು ಅದರ ಎಲೆಗಳನ್ನು ನಾನಾ ರೀತಿಯ ಆಹಾರ ಪದಾರ್ಥಗಳ ತಯಾರಿಕೆಗೆ ಬಳಸುತ್ತಾರೆ. ಇನ್ನು ಕೆಲವರು ಆ ಸೊಪ್ಪಿನಿಂದ ತಯಾರಾಗುವ ಪುಡಿಯನ್ನು ಸೇವನೆ ಮಾಡಲು ಇಷ್ಟಪಡುತ್ತಾರೆ. ಏಕೆಂದರೆ ಇವುಗಳಲ್ಲಿ ಹಲವಾರು ರೀತಿಯ ಆರೋಗ್ಯ ಪ್ರಯೋಜನಗಳಿದ್ದು ಚಯಾಪಚಯ ಕ್ರಿಯೆಯನ್ನು ಹೆಚ್ಚಿಸಿ ಜೀರ್ಣಾಂಗ ವ್ಯವಸ್ಥೆಗೆ ಪ್ರಯೋಜನಕಾರಿಯಾಗಿದೆ. ಅದಲ್ಲದೆ ಇವುಗಳಿಂದ ನಾನಾ ರೀತಿಯ ಅನುಕೂಲಗಳಿದ್ದು, ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

ಮೂಳೆಗಳನ್ನು ಬಲಪಡಿಸುತ್ತದೆ: ಹಾಲು ಯಾವಾಗಲೂ ಮೂಳೆಗಳಿಗೆ ಪ್ರಯೋಜನಕಾರಿ ಎಂಬುದು ನಿಮಗೆ ತಿಳಿದಿರಬಹುದು. ಅಲ್ಲದೆ ಇದರಲ್ಲಿ ಕ್ಯಾಲ್ಸಿಯಂ ಮತ್ತು ಮೆಗ್ನೀಸಿಯಮ್ ಕೂಡ ಹೆಚ್ಚಿನ ಪ್ರಮಾಣದಲ್ಲಿ ಕಂಡುಬರುತ್ತವೆ. ಹಾಲು ಮತ್ತು ನುಗ್ಗೆಸೊಪ್ಪಿನ ಪುಡಿಯನ್ನು ಒಟ್ಟು ಸೇರಿಸಿ ಕುಡಿದರೆ, ಇದು ಮೂಳೆಗಳನ್ನು ಬಲಪಡಿಸುತ್ತದೆ. ಪ್ರತಿದಿನ ಸಂಜೆ ಚಹಾದ ಬದಲು ನುಗ್ಗೆಸೊಪ್ಪಿನ ಪುಡಿಯನ್ನು ಹಾಲಿನಲ್ಲಿ ಬೆರೆಸಿ ಕುಡಿಯುವುದರಿಂದ ಮೂಳೆ ಮತ್ತು ಕೀಲು ನೋವಿಗೆ ಪರಿಹಾರ ಸಿಗುತ್ತದೆ.
ತೂಕ ಇಳಿಸಿಕೊಳ್ಳಲು ಪ್ರಯೋಜನಕಾರಿ: ನೀವು ತೂಕ ಕಡಿಮೆ ಮಾಡಿಕೊಳ್ಳಲು ಬಯಸುತ್ತಿದ್ದರೆ, ನುಗ್ಗೆಸೊಪ್ಪಿನ ಪುಡಿಯನ್ನು ಸೇವನೆ ಮಾಡಬಹುದು. ಈ ಪುಡಿಯಲ್ಲಿ ಫೈಬರ್ ಅಧಿಕವಾಗಿದ್ದು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ. ತೂಕ ಇಳಿಸಿಕೊಳ್ಳಲು ನೀವು ಈ ಪುಡಿಯನ್ನು ಪ್ರತಿದಿನ ಹಾಲಿನೊಂದಿಗೆ ಸೇರಿಸಿ ಕುಡಿಯಬಹುದು.
ಮಧುಮೇಹ ರೋಗಿಗಳಿಗೆ ಪ್ರಯೋಜನಕಾರಿ: ನೀವು ಕೂಡ ಮಧುಮೇಹದಿಂದ ಬಳಲುತ್ತಿದ್ದರೆ, ನುಗ್ಗೆಸೊಪ್ಪಿನ ಪುಡಿಯನ್ನು ಸೇವನೆ ಮಾಡುವುದು ಬಹಳ ಪ್ರಯೋಜನಕಾರಿಯಾಗಿದೆ. ಈ ಪುಡಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಈ ಪುಡಿಯನ್ನು ನೀವು ಪ್ರತಿದಿನ ಬೆಳಿಗ್ಗೆ ಅಥವಾ ಸಂಜೆ ಹಾಲಿನೊಂದಿಗೆ ಸೇವನೆ ಮಾಡಬೇಕು. ಆಗದಿದ್ದರೆ ಬೆಚ್ಚಗಿನ ನೀರಿನೊಂದಿಗೆ ಸಹ ಸೇವಿಸಬಹುದು.
ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ: ರೋಗನಿರೋಧಕ ಶಕ್ತಿಯನ್ನು ಆರೋಗ್ಯಕರವಾಗಿ ಹೆಚ್ಚಿಸಿಕೊಳ್ಳಲು ಆಹಾರದಲ್ಲಿ ನುಗ್ಗೆಸೊಪ್ಪಿನ ಪುಡಿಯನ್ನು ಸೇರಿಸಬಹುದು. ಏಕೆಂದರೆ ಇದರಲ್ಲಿ ಜೀವಸತ್ವಗಳು ಮತ್ತು ಖನಿಜಗಳು ಸಮೃದ್ಧವಾಗಿವೆ. ಈ ಪುಡಿಯನ್ನು ಸೇವಿಸುವುದರಿಂದ ದೇಹದ ರೋಗನಿರೋಧಕ ಶಕ್ತಿಯನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಹಾಗಾಗಿ ಪ್ರತಿದಿನ ಅಥವಾ ದಿನಬಿಟ್ಟು ದಿನ, ಹಾಲಿನೊಂದಿಗೆ ನುಗ್ಗೆಸೊಪ್ಪಿನ ಪುಡಿಯನ್ನು ಸೇವಿಸಬಹುದು.
ನುಗ್ಗೆಸೊಪ್ಪಿನ ಪುಡಿಯನ್ನು ಹಾಲಿನೊಂದಿಗೆ ಬೆರೆಸಿ ಕುಡಿಯುವುದು ಹೇಗೆ?
ಸಾಮಾನ್ಯವಾಗಿ ನುಗ್ಗೆಸೊಪ್ಪಿನ ಪುಡಿಯನ್ನು ಹಾಲಿನೊಂದಿಗೆ ಸೇವಿಸಬಹುದು. ಇಲ್ಲವಾದಲ್ಲಿ ನೀರಿನೊಂದಿಗೆ ಸೇವನೆ ಮಾಡಬಹುದು. ಇದಕ್ಕಾಗಿ ಒಂದು ಲೋಟ ಹಾಲಿಗೆ ಒಂದು ಟೀ ಸ್ಪೂನ್ ನುಗ್ಗೆ ಸೊಪ್ಪಿನ ಪುಡಿಯನ್ನು ಸೇರಿಸಿ ಸರಿಯಾಗಿ ಮಿಶ್ರಣ ಮಾಡಿಕೊಂಡು ಕುಡಿಯಿರಿ. ನೀವು ನುಗ್ಗೆಸೊಪ್ಪಿನ ಪುಡಿ ಸೇರಿಸಿದ ಹಾಲನ್ನು ಸಂಜೆ ಅಥವಾ ರಾತ್ರಿ ಸೇವಿಸಬಹುದು. ನಿರಂತರವಾಗಿ ಹಲವು ದಿನಗಳ ವರೆಗೆ ಪ್ರತಿದಿನ ಈ ಹಾಲನ್ನು ಕುಡಿಯುವುದರಿಂದ ಅನೇಕ ಸಮಸ್ಯೆಗಳು ನಿವಾರಣೆಯಾಗುತ್ತವೆ.
Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳ ಮಾಹಿತಿಯನ್ನು ಆಧರಿಸಿದೆ. ಡೈಲಿ ವಾರ್ತೆ ನ್ಯೂಸ್ ಗೂ ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.