

ಡೈಲಿ ವಾರ್ತೆ: 15/ಫೆ. /2025


ವಾಟೆಹೊಳೆ ಜಲಪಾತಕ್ಕೆ ಕಾಲುಜಾರಿ ಬಿದ್ದು ಇಬ್ಬರು ವಿದ್ಯಾರ್ಥಿಗಳು ಮೃತ್ಯು

ಶಿರಸಿ| ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದ ನಿಲ್ಕುಂದ ಸಮೀಪದ ವಾಟೆಹೊಳೆ ಫಾಲ್ಸ್‌ನಲ್ಲಿ ಕಾಲು ಜಾರಿ ಬಿದ್ದು ಇಬ್ಬರು ಯುವಕರು ನೀರುಪಾಲಾಗಿದ್ದಾರೆ.
ಜಲಪಾತಕ್ಕೆ ಆರು ಜನ ಯುವಕರು ತೆರಳಿದ್ದರು. ಈ ವೇಳೆ ಶಿರಸಿ ಮೂಲದ ಸುಹಾಸ್ ಶಟ್ಟಿ (22) ಹಾಗೂ ಅಕ್ಷಯ್ ಭಟ್ (22) ಕಾಲುಜಾರಿ ಬಿದ್ದಿದ್ದಾರೆ.
ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಮುಳುಗು ತಜ್ಞರು ಆಗಮಿಸಿ ಶೋಧಕಾರ್ಯ ನಡೆಸಿ ಮೃತದೇಹವನ್ನು ಹೊರತೆಗೆದಿದ್ದಾರೆ.
ಈ ಸಂಬಂಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.