ಡೈಲಿ ವಾರ್ತೆ: 15/ಫೆ. /2025

ಬಂಟ್ವಾಳದಲ್ಲಿ ಸಂತ ಶ್ರೀ ಸೇವಾಲಾಲ ಜಯಂತಿ ಆಚರಣೆ

ಬಂಟ್ವಾಳ : ಭರತ ಖಂಡದ ಧಾರ್ಮಿಕ ರಾಯಾಭಾರಿ ಎಂದೇ ಹೆಸರಾಗಿದ್ದ ಸಂತ ಶ್ರೀ ಸೇವಾಲಾಲ್ ಮಹಾರಾಜರು ಹಲವು ಪವಾಡಗಳ ಮೂಲಕ ಜನರ ಮನಗೆದ್ದವರು ಎಂದು ಚುನಾವಣಾ ಉಪತಹಸೀಲ್ದಾರ್ ನವೀನ್ ಕುಮಾರ್ ಬೆಂಜನಪದವು ರವರು ಹೇಳಿದರು.

ಬಿ.ಸಿ.ರೋಡಿನ ಮಿನಿ ವಿಧಾನ ಸೌಧದ ಸಭಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಶನಿವಾರ ನಡೆದ ಸಂತ ಶ್ರೀ ಸೇವಾಲಾಲ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಸಂತ ಶ್ರೀ ಸೇವಾಲಾಲ್ ಮಹಾರಾಜರು ಬಂಜಾರ ಸಮುದಾಯದ ಆರಾಧ್ಯ ದೈವ ಕೂಡ ಹೌದು. ಸೇವಾಲಾಲರು ಬಂಜಾರ ಸಮೂದಾಯಕ್ಕೆ ಮಾತ್ರ ಸೇವೆ ಮಾಡದೆ ಇತರರಿಗೆ ಸೇವೆ ಸಲ್ಲಿಸುತ್ತ ಸೇವಕರಾಗಿದ್ದರು ಎಂದರು.

ಈ ಸಂದರ್ಭದಲ್ಲಿ ಆಹಾರ ಶಿರಸ್ತೇದಾರ್ ಶಿವಪ್ರಸಾದ್ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಶುಕುಮಾರ್, ಸಮಾಜ ಬಾಂಧವ ಕಾರ್ಯಕಾರಿ ಸಮಿತಿ ಸದಸ್ಯ ಕರಿಬಸಪ್ಪ ನಾಯಕ್, ತಾಲೂಕು ಕಚೇರಿ ಸಿಬ್ಬಂದಿಗಳು ಮತ್ತು ಗ್ರಾಮಸಹಾಯಕರು ಉಪಸ್ಥಿತರಿದ್ದರು.