


ಡೈಲಿ ವಾರ್ತೆ: 16/ಫೆ. /2025


ಶಿವಮೊಗ್ಗ | ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು – ಖಾಸಗಿ ಆಸ್ಪತ್ರೆಯಲ್ಲಿ ಬಾಣಂತಿ ಸಾವು
ಶಿವಮೊಗ್ಗ: ಕಳೆದ 6 ದಿನಗಳ ಹಿಂದೆ ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದ ಬಾಣಂತಿ, ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ.
ಮೃತ ಮಹಿಳೆಯನ್ನು ಮಾಳೂರು ಗ್ರಾಮದ ಮಂಜುಳಾ (25) ಎಂದು ಗುರುತಿಸಲಾಗಿದೆ.
ಫೆ.10 ರಂದು ಅವರಿಗೆ ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆಯಾಗಿತ್ತು. ಬಳಿಕ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಈ ಹಿನ್ನಲೆ ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಅವರು ಸಾವಿಗೀಡಾಗಿದ್ದಾರೆ.
ಒಂದು ವರ್ಷದ ಹಿಂದೆ ಮಂಜುಳಾ ಅವರಿಗೆ ಮದುವೆಯಾಗಿತ್ತು. ಆಸ್ಪತ್ರೆಯ ಆವರಣದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.