


ಡೈಲಿ ವಾರ್ತೆ: 18/ಫೆ. /2025


ಉಡುಪಿ:ಎರಡು ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿ: ಓರ್ವ ಸವಾರ ಸ್ಥಳದಲ್ಲೇ ಸಾವು
ಉಡುಪಿ: ಎರಡು ಬೈಕ್ ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸರವಾರರೊಬ್ಬರು ಸ್ಥಳದಲ್ಲಿ ಮೃತಪಟ್ಟ ಘಟನೆ ಸೋಮವಾರ ತಡರಾತ್ರಿ ಅಜ್ಜರಕಾಡು ಅಗ್ನಿಶಾಮಕ ದಳ ಠಾಣೆಯ ಸಮೀಪ ನಡೆದಿದೆ.
ಮೃತರನ್ನು ಸ್ಯಾಮುಯೆಲ್ ಸದಾನಂದ ಕರ್ಕಡ(59) ಎಂದು ಗುರುತಿಸಲಾಗಿದೆ.
ಅತಿ ವೇಗದಿಂದ ಬಂದ ಎರಡು ಬೈಕುಗಳು ಮುಖಾಮುಖಿ ಡಿಕ್ಕಿಯಾಗಿದ್ದು ಇದರ ಪರಿಣಾಮ ಸದಾನಂದ ರಸ್ತೆಗೆ ಬಿದ್ದರೆನ್ನಲಾಗಿದೆ.
ಇದರಿಂದ ಗಂಭೀರವಾಗಿ ಗಾಯಗೊಂಡು ಅವರು ಸ್ಥಳದಲ್ಲೇ ಮೃತಪಟ್ಟರೆಂದು ತಿಳಿದು ಬಂದಿದೆ. ಅಪಘಾತದಿಂದ ಎರಡು ಬೈಕ್ ಗಳು ಕೂಡ ಸಂಪೂರ್ಣ ಜಖಂಗೊಂಡಿವೆ. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.