ಡೈಲಿ ವಾರ್ತೆ: 18/ಫೆ. /2025

ತೀರ್ಥಹಳ್ಳಿ| ಎರಡು ಕಾರುಗಳು ಮುಖಮುಖಿ ಡಿಕ್ಕಿ – ಪ್ರಯಾಣಿಕರು ಪಾರು

ತೀರ್ಥಹಳ್ಳಿ| ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿಯಲ್ಲಿ ಮಂಗಳವಾರ ಸಂಭವಿಸಿದೆ.

ಅಪಘಾತದ ತೀವ್ರತೆಗೆ ಎರಡೂ ಕಾರುಗಳು ನುಜ್ಜುಗುಜ್ಜಾಗಿದು ಕಾರಿನಲ್ಲಿದ್ದ ಪ್ರಯಾಣಿಕರು ಪವಾಡ ಸಾದೃಶ್ಯ ರೀತಿಯಲ್ಲಿ ಪಾರಾಗಿದ್ದಾರೆ.

ಮಣಿಪಾಲದಿಂದ ಶಿವಮೊಗ್ಗದ ಕಡೆಗೆ ತೆರಳುತ್ತಿದ್ದ ಕಾರು ಹಾಗು ಶಿವಮೊಗ್ಗದಿಂದ ಉಡುಪಿ ಕಡೆಗೆ ಬರುತ್ತಿದ್ದ ಕಾರುಗಳು ಬೆಜ್ಜವಳ್ಳಿಯ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಳಿ ಮುಖಾಮುಖಿಯಾಗಿ ಅಪಘಾತ ಸಂಭವಿಸಿದೆ.

ಮಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.