


ಡೈಲಿ ವಾರ್ತೆ: 18/ಫೆ. /2025


ಬೆಳ್ತಂಗಡಿ| ಶಾಲಾ ಮಕ್ಕಳ ಮೇಲೆ ಹೆಜ್ಜೇನು ದಾಳಿ – ಮೂವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ
ಬೆಳ್ತಂಗಡಿ: ಶಾಲೆಯಲ್ಲಿ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಕ್ಕಿಂಜೆ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಪ್ರಾರ್ಥನೆ ಮುಗಿಸಿ ಶಾಲೆ ಒಳಗೆ ಹೋಗುವಾಗ ಹೆಜ್ಜೇನು ದಾಳಿ ನಡೆಸಿದೆ. 15 ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ ಮಾಡಿದೆ. ಮೂವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳಾಗಿವೆ.
ಹೆಜ್ಜೇನು ದಾಳಿಗೊಳಗಾದ ಮಕ್ಕಳಿಗೆ ಕಕ್ಕಿಂಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸುರಕ್ಷತಾ ದೃಷ್ಠಿಯಿಂದ ಶಿಕ್ಷಕರು ಶಾಲೆಗೆ ರಜೆ ನೀಡಿದ್ದಾರೆ.