ಡೈಲಿ ವಾರ್ತೆ: 18/ಫೆ. /2025

ಭರತನಾಟ್ಯ ವಿದ್ವತ್ ಪೂರ್ವ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ಸರ್ವೇಶ್ ಭಟ್

ಡಾ| ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾನಿಲಯ, ಮೈಸೂರು ನಡೆಸಿದ ಭರತನಾಟ್ಯ ವಿದ್ವತ್ ಪೂರ್ವ ಪರೀಕ್ಷೆಯಲ್ಲಿ ಸರ್ವೇಶ್ ಭಟ್ ಶೇ.83.8% ಅಂಕಗಳನ್ನು ಪಡೆದು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಶ್ರೀ ಭ್ರಾಮರಿ ನಾಟ್ಯಾಲಯ , ಅಮ್ಮುಂಜೆಯ ನೃತ್ಯಗುರು ವಿದ್ವಾನ್ ಕೆ.ಭವಾನಿ ಶಂಕರ್ ಅವರ ಮಾರ್ಗದರ್ಶನದಲ್ಲಿ ಭರತನಾಟ್ಯ ತರಬೇತಿ ಪಡೆಯುತ್ತಿದ್ದಾರೆ.

ಪೆರಂಪಳ್ಳಿಯ ವೇದಮೂರ್ತಿ ಪ್ರಾಣೇಶ್ ಭಟ್ ಹಾಗೂ ಶ್ರೀಮತಿ ಸೌಮ್ಯ ಭಟ್ ಇವರ ಪುತ್ರರಾಗಿದ್ದು.
ಜೈನ್ ಯೂನಿವರ್ಸಿಟಿ ಬೆಂಗಳೂರು ಸಂಸ್ಥೆಯಲ್ಲಿ ಎಂಬಿಎ ಪದವಿಯನ್ನು ಮುಂದುವರಿಸುತ್ತಿದ್ದಾರೆ.