

ಡೈಲಿ ವಾರ್ತೆ: 19/ಫೆ. /2025


ಫೆ. 22 ರಂದು ಕೋಡಿ ಬ್ಯಾರೀಸ್ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಬೃಹತ್ ಉದ್ಯೋಗ ಮೇಳ

ಕುಂದಾಪುರ| ಕುಂದಾಪುರ ಸುತ್ತಮುತ್ತಲಿನ ಉದ್ಯೋಗಾಕಾಂಕ್ಷಿಗಳಿಗೆ ಒಂದು ಸಿಹಿ ಸುದ್ದಿ. ಕುಂದಾಪುರದ ಕೋಡಿಯಲ್ಲಿರುವ ಬ್ಯಾರೀಸ್ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಫೆಬ್ರವರಿ 22 ರಂದು ಬೃಹತ್ ಉದ್ಯೋಗ ಮೇಳ ನಡೆಯಲಿದೆ.
ಉಡುಪಿ, ಮಂಗಳೂರು, ಬೆಂಗಳೂರು, ಮುಂಬೈ , ದುಬೈ ಸೇರಿ ಹತ್ತಾರು ರಾಷ್ಟೀಯ ಮತ್ತು ಅಂತಾರಾಷ್ಟ್ರೀಯ ಕಂಪೆನಿಗಳು ಈ ಬೃಹತ್ ಉದ್ಯೋಗಮೇಳದಲ್ಲಿ ಭಾಗವಹಿಸಲಿದ್ದು ನೂರಾರು ಹುದ್ದೆಗಳಿಗೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ.
ಈ ಉದ್ಯೋಗ ಮೇಳದ ವಿಶೇಷ ಆಕರ್ಷಣೆ ವಿಶೇಷ ಚೇತನರಿಗೂ ಉಚಿತ ತರಬೇತಿ ನೀಡಿ ಉದ್ಯೋಗ ಅವಕಾಶವನ್ನೂ ನೀಡುವ ಕಂಪೆನಿಗಳು ಭಾಗವಹಿಸುತ್ತಿವೆ.
18 ವರ್ಷ ಮೇಲ್ಪಟ್ಟ 10ನೇ, ಪಿಯುಸಿ, ಐಟಿಐ, ಡಿಪ್ಲೋಮಾ, ಡಿಗ್ರಿ , ಸ್ನಾತಕೋತ್ತರ ಪಡೆದ ಅಭ್ಯರ್ಥಿಗಳು ಈ ಬೃಹತ್ ಉದ್ಯೋಗ ಮೇಳದ ಸದುಪಯೋಗ ಪಡೆದುಕೊಳ್ಳಬಹುದು.
ಈ ಉದ್ಯೋಗ ಮೇಳವು ಬ್ಯಾರಿಸ್ ನಾಲೆಡ್ಜ್ ಕ್ಯಾಂಪಸ್ ಕೋಡಿಯಲ್ಲಿ ನಡೆಯಲಿದೆ ಎಂದು ಬ್ಯಾರಿಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಹಾಜಿ ಅಬ್ದುಲ್ ರಹಿಮಾನ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ – 7019693540, 7899633387