

ಡೈಲಿ ವಾರ್ತೆ: 19/ಫೆ. /2025


ಜೆಸಿಬಿ ಹರಿದು ಆಟವಾಡುತ್ತಿದ್ದ 2 ವರ್ಷದ ಮಗು ಸ್ಥಳದಲ್ಲೇ ಮೃತ್ಯು

ಬೆಂಗಳೂರು: ಆಟವಾಡುತ್ತಿದ್ದ ಮಗು ಮೇಲೆ ಜೆಸಿಬಿ ಹರಿದ ಪರಿಣಾಮ ಮಗು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯ ಕಾಡುಗೋಡಿ ಬಳಿಯ ಸಿಟಿ ಲೇಔಟ್‌ನಲ್ಲಿ ನಡೆದಿದೆ.
ಥವನ್ ರೆಡ್ಡಿ (2) ಮೃತಪಟ್ಟ ಮಗು. ಚಾಲಕ ಜೆಸಿಬಿಯನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿದ ಪರಿಣಾಮ ಮನೆ ಮುಂದೆ ಆಟವಾಡುತ್ತಿದ್ದ ಮಗು ಮೇಲೆ ಹರಿದಿದೆ. ರಸ್ತೆಯಲ್ಲಿ ಆಟವಾಡುತ್ತಿದ್ದ ಥವನ್ ರೆಡ್ಡಿ ತಲೆಯ ಮೇಲೆ ಜೆಸಿಬಿ ಹರಿದಿದೆ.
ಕೂಡಲೇ ಮಗುವನ್ನು ವೈದೇಹಿ ಆಸ್ಪತ್ರೆಗೆ ರವಾನಿಸಲಾಗಿದೆ. ಪರೀಕ್ಷೆ ನಡೆಸಿದ ವೈದ್ಯರು ಮಾರ್ಗ ಮಧ್ಯದಲ್ಲಿ ಮಗು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆ ನಡೆದಿದ್ದು, ಮಹಾದೇವಪುರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.