ಡೈಲಿ ವಾರ್ತೆ: 22/ಫೆ. /2025

ಕೊರಗ ಆದಿವಾಸಿ ಕರಕುಶಲ ವಸ್ತುಗಳ ಮಳಿಗೆಗೆ ಉಡುಪಿ ಜಿಲ್ಲಾಧಿಕಾರಿ ಹಾಗೂ ಸಮಾಜ ಕಲ್ಯಾಣ ಇಲಾಖಾ ನಿರ್ದೇಶಕರ ಭೇಟಿ

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಮಂಗಳೂರು ವಿಶ್ವವಿದ್ಯಾನಿಲಯ ಕೊಣಾಜೆ ಇವರ ಸಂಯುಕ್ತ ಆಶ್ರಯದಲ್ಲಿ ಕೊಣಾಜೆಯಲ್ಲಿ ನಡೆಯುತ್ತಿರುವ ಎರಡು ದಿನಗಳ ದಕ್ಷಿಣ ಕನ್ನಡ ಜಿಲ್ಲಾ 27ನೇ ಕನ್ನಡ ಸಾಹಿತ್ಯ ಸಮ್ಮೇಳನ ಕೊರಗ ಆದಿವಾಸಿ ಕರಕುಶಲ ವಸ್ತುಗಳ ಮಳಿಗೆಗೆ ಉಡುಪಿ ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿ ಹಾಗೂ ರಾಜ್ಯ ಸಮಾಜ ಕಲ್ಯಾಣ ಇಲಾಖಾ ನಿರ್ದೇಶಕರು, ಊರ್ಮಿಳಾ ರವರು ಭೇಟಿ ನೀಡಿ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂಧರ್ಭದಲ್ಲಿ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ಕರ್ನಾಟಕ – ಕೇರಳ ಇದರ ಅಧ್ಯಕ್ಷರಾದ ಸುಶೀಲ ನಾಡ ಮತ್ತು ಉಪನ್ಯಾಸಕರಾದ ಡಾ. ದಿನಕರ ಕೆಂಜೂರು ಉಪಸ್ಥಿತರಿದ್ದರು.

ಕೊರಗ ಕರಕುಶಲ ವಸ್ತುಗಳ ಮಳಿಗೆಯ ಜವಾಬ್ದಾರಿಯನ್ನು ನರಸಿಂಹ ಪೆರ್ಡೂರು ಮತ್ತು ಸುಪ್ರಿಯಾ ಎಸ್. ಕಿನ್ನಿಗೋಳಿ ನಿರ್ವಹಿಸಿದ್ದರು.