ಡೈಲಿ ವಾರ್ತೆ: 23/ಫೆ. /2025

ಬೆಂಗಳೂರಿನಲ್ಲಿ ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ

ಬೆಂಗಳೂರು: ಅಶೋಕನಗರದ ಗರುಡಾ ಮಾಲ್ ಬಳಿ ಫೆ. 22 ರಂದು ತಡರಾತ್ರಿ 1 ಗಂಟೆ ಸುಮಾರಿಗೆ ಕಾಂಗ್ರೆಸ್​ ಮುಖಂಡನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.

ಕೊಲೆಯಾದ ವ್ಯಕ್ತಿ ಹೈದರ್ ಅಲಿ ಎಂದು ಗುರುತಿಸಲಾಗಿದೆ ಮದ್ಯರಾತ್ರಿ ಲೈವ್ ಬ್ಯಾಂಡ್​ ಕಾರ್ಯಕ್ರಮವೊಂದನ್ನು ಮುಗಿಸಿಕೊಂಡು ಸ್ನೇಹಿತನ ಜೊತೆಗೆ ಬೈಕ್​ನಲ್ಲಿ ತೆರಳುತ್ತಿದ್ದರು. ಈ ವೇಳೆ ಬೈಕ್​ನಲ್ಲಿ ಹಿಂಬಾಲಿಸಿಕೊಂಡು ಬಂದ ದುಷ್ಕರ್ಮಿಗಳು ಕಾಂಗ್ರೆಸ್​ ಮುಖಂಡ ಹೈದರ್ ಅಲಿಯ ಮೇಲೆ ಹಲ್ಲೆ ಮಾಡಿ, ಪರಾರಿಯಾಗಿದ್ದಾರೆ.

ವಿಚಾರ ತಿಳಿದು ಸ್ಥಳಕ್ಕೆ ದೌಡಾಯಿಸಿ ಅಶೋಕ ನಗರ ಠಾಣೆ ಪೊಲೀಸರು ಗಾಯದ ಮಡುವಲ್ಲಿ ಬಿದ್ದ ಹೈದರ್ ಅಲಿಯನ್ನು ಕೂಡಲೆ ಪೊಲೀಸರು ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ, ಅಷ್ಟರಲ್ಲಾಗಲೇ ಮೃತಪಟ್ಟಿದ್ದರು. ವಿಚಾರ ತಿಳಿದು ಹೈದರ್​ ಅಲಿಯ ಬೆಂಬಲಿಗರು ಬೌರಿಂಗ್ ಆಸ್ಪತ್ರೆ ಬಳಿ ಜಮಾಯಿಸಿ ಲಾಂಗು, ಮಚ್ಚು ಹಿಡಿದು ಆಸ್ಪತ್ರೆ ಬಳಿ ಝಳಪಿಸಿದರು. ಬೌರಿಂಗ್ ಆಸ್ಪತ್ರೆ ಗೇಟ್ ತಳ್ಳಿ ಆಕ್ರೋಶ ವ್ಯಕ್ತಪಡಿಸಿದರು. ಸ್ಥಳದಲ್ಲಿದ್ದ ಅಶೋಕನಗರ ಠಾಣೆ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದರು.

ಘಟನೆ ಸಂಬಂಧ ಅಶೋಕನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಲೆ ಆರೋಪಿಗಳ ಪತ್ತೆಗೆ ಅಶೋಕನಗರ ಪೊಲೀಸರು ಹುಡುಕಾಟ ನಡೆಸಿದ್ದಾರೆ.