


ಡೈಲಿ ವಾರ್ತೆ: 26/ಫೆ. /2025


ಫರಂಗಿಪೇಟೆಯ ವಿದ್ಯಾರ್ಥಿ ನಾಪತ್ತೆ
ಬಂಟ್ವಾಳ : ವಿದ್ಯಾರ್ಥಿಯೋರ್ವ ನಾಪತ್ತೆಯಾಗಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಫರಂಗಿಪೇಟೆ ಸಮೀಪದ ಕಿದೆಬೆಟ್ಟು ನಿವಾಸಿ ಪದ್ಮನಾಭ ಅವರ ಪುತ್ರ ದಿಗಂತ್(17) ನಾಪತ್ತೆಯಾದ ವಿದ್ಯಾರ್ಥಿಯಾಗಿದ್ದು, ಈತ ಮಂಗಳೂರಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ.
ಆತ ಫೆ. 25ರಂದು ಸಂಜೆ ದೇವಸ್ಥಾನಕ್ಕೆ ಹೋಗುವುದಾಗಿ ಮನೆಯಲ್ಲಿ ತಿಳಿಸಿದ್ದು, ಆದರೆ ದೇವಸ್ಥಾನಕ್ಕೆ ಹೋಗದೆ, ಮನೆಗೂ ಮರಳದೆ ನಾಪತ್ತೆಯಾಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಆತನನ್ನು ಹುಡುಕಾಡಿದಾಗ ಆತನ ಚಪ್ಪಲಿ ಹಾಗೂ ಮೊಬೈಲ್ ಫೋನ್ ಮನೆಯ ಸಮೀಪದ ರೈಲ್ವೇ ಹಳಿಯಲ್ಲಿ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.