ಡೈಲಿ ವಾರ್ತೆ: 26/ಫೆ. /2025

ಉಪ್ಪಿನಂಗಡಿ| ದ್ವಿಚಕ್ರ ವಾಹನ ಡಿಕ್ಕಿ – ರಸ್ತೆ ದಾಟುತ್ತಿದ್ದ ಮಹಿಳೆ ಸಾವು

ಬಂಟ್ವಾಳ : ದ್ವಿಚಕ್ರ ವಾಹನ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ಬಿ.ಸಿ.ರೋಡಿನ ಎಲ್ಲೈಸಿ ಕಚೇರಿ ಮುಂಭಾಗ ನಡೆದಿದೆ.

ಉಪ್ಪಿನಂಗಡಿ ಸಮೀಪದ ನಟ್ಟಿಬೈಲು ಎಂಬಲ್ಲಿನ ನಿವಾಸಿ ಕೆ.ಸದಾರಾಮ ಅವರ ಪತ್ನಿ ಸರಸ್ವತಿ (50) ಅವರು ಎಲ್ಲೈಸಿ ಕಚೇರಿಯಲ್ಲಿ ಕೆಲಸ ಮುಗಿಸಿ, ಉಪ್ಪಿನಂಗಡಿಗೆ ತೆರಳಲು ರಸ್ತೆ ದಾಟುತ್ತಿದ್ದ ವೇಳೆ ಅವರಿಗೆ ಸ್ಕೂಟರ್ ಒಂದು ಡಿಕ್ಕಿ ಹೊಡೆದಿದೆ.

ತಲೆಯ ಭಾಗಕ್ಕೆ ಗಾಯಗಳಾಗಿದ್ದ ಅವರನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ಸಾಗಿಸಿ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗತ್ತು. ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟಿದ್ದಾರೆ. ಮೃತರ ಪತಿ ಎಲ್ಲೈಸಿ ಏಜೆಂಟ್ ಆಗಿದ್ದು, ಕಚೇರಿಯಲ್ಲಿ ಕಾರ್ಯಕ್ರಮ ಇದ್ದ ಕಾರಣ ಇವರು ಬಂದಿದ್ದರು ಎನ್ನಲಾಗಿದೆ. ಸರಸ್ವತಿ ಅವರು ಇಬ್ಬರು ಪುತ್ರರನ್ನು ಅಗಲಿದ್ದಾರೆ

ಈ ಬಗ್ಗೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.