ಡೈಲಿ ವಾರ್ತೆ: 26/ಫೆ. /2025

ಬಿ.ಸಿ.ರೋಡ್| ಶಾಂತಿ ಅಂಗಡಿ ನಿವಾಸಿ ಎಸ್.ಎಂ. ಮುಹಮ್ಮದ್ ಆಲಿ (70) ಅಲ್ಪಕಾಲದ ಅನಾರೋಗ್ಯದಿಂದ ನಿಧನ

ಬಂಟ್ವಾಳ : ಬಿ.ಸಿ.ರೋಡ್ ಸಮೀಪದ ಶಾಂತಿ ಅಂಗಡಿ ನಿವಾಸಿ ಎಸ್.ಎಂ. ಮುಹಮ್ಮದ್ ಆಲಿ (70) ಅಲ್ಪಕಾಲದ ಅನಾರೋಗ್ಯದಿಂದ ಬುಧವಾರ ಸಂಜೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಮಿತ್ತಬೈಲ್ ಮುಹಿಯ್ಯುದ್ದೀನ್ ಜುಮಾ ಮಸೀದಿ, ಮುಸ್ಲಿಂ ಯೂತ್ ಫೆಡರೇಷನ್ (ಎಂ.ವೈ.ಎಫ್), ಜಮೀಯ್ಯತುಲ್ ಫಲಾಹ್ ಬಂಟ್ವಾಳ, ಮುಸ್ಲಿಂ ಯಂಗ್ ಮೆನ್ಸ್ ಅಸೋಸಿಯೇಷನ್ ಮೊದಲಾದ ಸಂಸ್ಥೆಗಳ ಅಧ್ಯಕ್ಷರಾಗಿ, ಜಿಲ್ಲೆಯ ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತನ್ನನ್ನು ತೊಡಗಿಸಿಕೊಂಡಿದ್ದು ಜನಾನುರಾಗಿಯಾಗಿದ್ದರು.

ಮೃತರು ಪತ್ನಿ, ಓರ್ವ ಪುತ್ರ, ಮೂವರು ಪುತ್ರಿಯರ ಸಹಿತ ಹಲವಾರು ಬಂಧು ಮಿತ್ರರನ್ನು ಅಗಲಿದ್ದಾರೆ.

ಸಂತಾಪ:
ನಿಧನಕ್ಕೆ ಮಾಜಿ ಸಚಿವ ಬಿ.ರಮಾನಾಥ ರೈ, ರಾಜ್ಯ ಗೇರು ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಹಾಜಿ ಬಿ.ಎಚ್.ಖಾದರ್ ಬಂಟ್ವಾಳ, ಇರ್ಷಾದ್ ದಾರಿಮಿ ಅಲ್ ಜಝರಿ ಮಿತ್ತಬೈಲ್, ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಎಂ.ಎಸ್. ಮುಹಮ್ಮದ್, ಬಂಟ್ವಾಳ ತಾಲೂಕು ಸಂಯುಕ್ತ ಜಮಾಅತ್ ಕಮಿಟಿ ಅಧ್ಯಕ್ಷ ಹಾಜಿ ಮುಹಮ್ಮದ್ ಹನೀಫ್ ಗೋಳ್ತಮಜಲ್, ಜಮೀಯ್ಯತುಲ್ ಫಲಾಹ್ ಜಿಲ್ಲಾದ್ಯಕ್ಷ ಕೆ.ಕೆ.ಸಾಹುಲ್ ಹಮೀದ್, ಬಂಟ್ವಾಳ ತಾಲೂಕು ಘಟಕಾದ್ಯಕ್ಷ ರಶೀದ್ ವಿಟ್ಲ, ಮುಸ್ಲಿಂ ಸಮಾಜ ಬಂಟ್ವಾಳ ಅಧ್ಯಕ್ಷ ಕೆ.ಎಚ್.ಅಬೂಬಕ್ಕರ್, ಮಿತ್ತಬೈಲ್ ಜುಮಾ ಮಸೀದಿ ಅಧ್ಯಕ್ಷ ಮುಹಮ್ಮದ್ ಅದ್ದೇಡಿ, ಕಾರ್ಯದರ್ಶಿ ಅಕ್ಬರ್ ಅಲಿ ಪೊನ್ನೋಡಿ ಸಂತಾಪ ಸೂಚಿಸಿದ್ದಾರೆ.