


*ಡೈಲಿ ವಾರ್ತೆ: 27/ಫೆ. /2025*


ಅಸಂವಿಧಾನಿಕ ವಕ್ಫ್ ತಿದ್ದುಪಡಿ ಮಸೂದೆಯ ವಿರುದ್ಧ ನಡೆಯುವ ಪ್ರತಿಭಟನಾ ಸಭೆಗೆ ಎಸ್.ಡಿ.ಟಿ.ಯು ಮಂಗಳೂರು ನಗರ ಜಿಲ್ಲಾ ಸಮಿತಿಯ ಸಂಪೂರ್ಣ ಬೆಂಬಲ
ಮಂಗಳೂರು :ಮೋದಿ ನೇತೃತ್ವದ ಕೇಂದ್ರ ಸರಕಾರವು ಜಾರಿಗೆ ತರಲು ಹೊರಟಿರುವ ಅಸಂವಿಧಾನಿಕ ವಕ್ಫ್ ತಿದ್ದುಪಡಿ ಮಸೂದೆಯ ವಿರುದ್ಧ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಫೆಬ್ರವರಿ 28ರಂದು ಶುಕ್ರವಾರ ಅಪರಾಹ್ನ 3:00 ಗಂಟೆಗೆ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಜಾಥ ಹಾಗೂ ಖಂಡನಾ ಸಭೆ ಆಯೋಜಿಸಿದೆ.
ಈ ಪ್ರತಿಭಟನಾ ಸಭೆಗೆ ಎಸ್.ಡಿ.ಟಿ.ಯು ಮಂಗಳೂರು ನಗರ ಜಿಲ್ಲಾ ಸಮಿತಿಯು ಸಂಪೂರ್ಣ ಬೆಂಬಲವನ್ನು ನೀಡಿದೆ ಹಾಗೂ ನಾಡಿನ ಎಲ್ಲಾ ಸಂವಿಧಾನ ಪ್ರೇಮಿಗಳು ಈ ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸ ಬೇಕೆಂದು ಎಸ್.ಡಿ.ಟಿ.ಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಹಿಮಾನ್ ಬೋಳಿಯಾರ್ ರವರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.