

ಡೈಲಿ ವಾರ್ತೆ: 01/ಮಾರ್ಚ್ /2025


ಬೊಜ್ಜಿನ ಸಮಸ್ಯೆಯಿಂದ ಮುಕ್ತಿ ಪಡೆಯಲು ಪ್ರತಿನಿತ್ಯ ಈ ಹಣ್ಣಿನ ಸೇವನೆ ಮಾಡಿ

ಇತ್ತೀಚಿನ ದಿನಗಳಲ್ಲಿ ಬೊಜ್ಜಿನ ಸಮಸ್ಯೆ ಜಾಸ್ತಿಯಾಗುತ್ತಿದ್ದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೂಡ ಬೊಜ್ಜಿನ ವಿರುದ್ಧ ಜನರಲ್ಲಿ ಜಾಗೃತಿ ಮೂಡಿಸಲು ಹಲವಾರು ರೀತಿಯಲ್ಲಿ ಪ್ರಯತ್ನಿಸುತ್ತಿದ್ದಾರೆ. ಹಾಗಾಗಿ ಆ ಪ್ರಯತ್ನಕ್ಕೆ ಪುಷ್ಟಿ ನೀಡುವುದರ ಜೊತೆಗೆ ಮುಂದಿನ ದಿನಗಳಲ್ಲಿ ನಮ್ಮ ಆರೋಗ್ಯ ಕಾಪಾಡಿಕೊಳ್ಳಲು ನಾವು ಒಳ್ಳೆಯ ಆಹಾರಗಳನ್ನು ಸೇವಿಸಬೇಕಾಗಿದೆ. ಅಂತಹ ಆಹಾರಗಳಲ್ಲಿ ಕಿವಿ ಹಣ್ಣು ಕೂಡ ಒಂದು. ಈ ಹಣ್ಣಿನಿಂದ ಸಾಕಷ್ಟು ಪ್ರಯೋಜನಗಳಿವೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಅದರಲ್ಲಿಯೂ ಈ ಹಣ್ಣಿನಲ್ಲಿರುವ ಫೈಬರ್ ಅಂಶವು ಜೀರ್ಣಾಂಗ ವ್ಯವಸ್ಥೆಗೆ ಒಳ್ಳೆಯದು, ಜೊತೆಗೆ ಈ ಹಣ್ಣನ್ನು ತಿಂದ ನಂತರ, ಹೊಟ್ಟೆ ತುಂಬಿದ ಅನುಭವವಾಗುತ್ತದೆ. ಹಾಗಾಗಿ ತೂಕ ಕಡಿಮೆ ಮಾಡಿಕೊಳ್ಳಲು ಪ್ರಯತ್ನಿಸುತ್ತಿರುವವರಿಗೆ ಇದು ತುಂಬಾ ಒಳ್ಳೆಯ ಆಯ್ಕೆ ಎಂದು ತಜ್ಞರು ಹೇಳುತ್ತಾರೆ. ಹಾಗಾದರೆ ಇದರ ಸೇವನೆ ಮಾಡುವುದರಿಂದ ಯಾವ ರೀತಿಯ ಉಪಯೋಗವಿದೆ ಎಂಬುದನ್ನು ತಿಳಿದುಕೊಳ್ಳಿ.

ಕ್ಯಾನ್ಸರ್ ಕೋಶಗಳ ಬೆಳವಣಿಗೆಯನ್ನು ತಡೆಯುತ್ತದೆ: ಕೆಲವು ಅಧ್ಯಯನಗಳ ಪ್ರಕಾರ, ಕಿವಿ ಹಣ್ಣನ್ನು ತಿನ್ನುವುದರಿಂದ ಉಸಿರಾಟದ ತೊಂದರೆ ಮತ್ತು ಕೆಮ್ಮು ಕಡಿಮೆಯಾಗುತ್ತದೆ. ಅಲ್ಲದೆ ಕಿವಿ ಹಣ್ಣುಗಳು ಉತ್ಕರ್ಷಣ ನಿರೋಧಕಗಳು ಮತ್ತು ಇತರ ಫೈಟೊಕೆಮಿಕಲ್ಗಳನ್ನು ಹೊಂದಿರುತ್ತವೆ. ಅವು ಕ್ಯಾನ್ಸರ್ ಕೋಶಗಳ ಬೆಳವಣಿಗೆಯನ್ನು ಪ್ರತಿಬಂಧಿಸಲು ಸಹಾಯ ಮಾಡುತ್ತವೆ. ಜೊತೆಗೆ ಕೆಲವು ರೀತಿಯ ಕ್ಯಾನ್ಸರ್ ಬರುವ ಅಪಾಯವನ್ನು ಕಡಿಮೆ ಮಾಡಬಹುದು.
ತೂಕ ಕಡಿಮೆ ಮಾಡಲು ಸಹಕಾರಿ: ಕಿವಿ ಹಣ್ಣಿನಲ್ಲಿ ಕಡಿಮೆ ಕ್ಯಾಲೊರಿ ಮತ್ತು ಫೈಬರ್ ಅಧಿಕವಾಗಿರುತ್ತದೆ. ತೂಕ ಇಳಿಸಿಕೊಳ್ಳಲು ಅಥವಾ ಒಂದೇ ರೀತಿಯ ಅಥವಾ ಆರೋಗ್ಯಕರ ತೂಕವನ್ನು ಕಾಪಾಡಿಕೊಳ್ಳಲು ಪ್ರಯತ್ನಿಸುತ್ತಿರುವವರಿಗೆ ಇದು ಉತ್ತಮ ಆಹಾರವಾಗಿದೆ. ಏಕೆಂದರೆ ಕಿವಿ ಹಣ್ಣನ್ನು ತಿಂದ ನಂತರ, ಹೊಟ್ಟೆ ತುಂಬಿದ ಅನುಭವವಾಗುತ್ತದೆ. ಇದರಿಂದ ಪದೇ ಪದೇ ಏನಾದರೂ ತಿನ್ನಬೇಕು ಎಂದು ಅನಿಸುವುದಿಲ್ಲ. ಅದಲ್ಲದೆ ಇದು ಮಲಬದ್ಧತೆಯಂತಹ ಜೀರ್ಣಕಾರಿ ಸಮಸ್ಯೆಗಳನ್ನು ದೂರವಿಡುತ್ತದೆ. ಇದನ್ನು ಜ್ಯೂಸ್ ಅಥವಾ ಸಲಾಡ್ ಗಳ ರೂಪದಲ್ಲಿ ಸೇವನೆ ಮಾಡಬಹುದು.
ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ: ಕಿವಿ ಹಣ್ಣಿನಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಇದು ಸೋಂಕಿನಿಂದ ನಿಮ್ಮನ್ನು ದೂರವಿಡಲು ಸಹಾಯ ಮಾಡುತ್ತದೆ. ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಕಿವಿ ಹಣ್ಣಿನಲ್ಲಿರುವ ವಿಟಮಿನ್ ಕೆ ಮೂಳೆ ಬಿಗಿತಕ್ಕೆ ಸಹಾಯ ಮಾಡುತ್ತದೆ.
ಶ್ವಾಸಕೋಶದ ಕಾರ್ಯವನ್ನು ಸುಧಾರಿಸುತ್ತದೆ. ಕಿವಿ ಹಣ್ಣಿನಲ್ಲಿ ಆಕ್ಟಿನಿಡಿನ್ ಎಂಬ ಕಿಣ್ವವಿದೆ, ಇದು ಪ್ರೋಟೀನ್ಗಳನ್ನು ವಿಭಜಿಸಲು ಸಹಾಯ ಮಾಡುತ್ತದೆ, ಜೀರ್ಣಕ್ರಿಯೆಯನ್ನು ಸುಲಭಗೊಳಿಸುತ್ತದೆ.
ಕಣ್ಣಿನ ಆರೋಗ್ಯಕ್ಕೆ ಒಳ್ಳೆಯದು: ಕಿವಿ ಹಣ್ಣಿನಲ್ಲಿರುವ ನರಸಂವಾಹಕ ಸೆರೊಟೋನಿನ್ ನಿದ್ರೆಯನ್ನು ಉತ್ತೇಜಿಸಲು ಸಹಾಯ ಮಾಡುತ್ತದೆ. ಕೆಲವು ಅಧ್ಯಯನಗಳ ಪ್ರಕಾರ, ಈ ಹಣ್ಣನ್ನು ತಿನ್ನುವುದರಿಂದ ನಿದ್ರೆಯ ಗುಣಮಟ್ಟ ಮತ್ತು ನಿದ್ರೆಯ ಅವಧಿಯನ್ನು ಸುಧಾರಿಸಬಹುದು. ಕಿವಿ ಹಣ್ಣುಗಳಲ್ಲಿ ಲ್ಯೂಟಿನ್ ಮತ್ತು ಜಿಯಾಕ್ಸಾಂಥಿನ್ ನಂತಹ ಉತ್ಕರ್ಷಣ ನಿರೋಧಕಗಳಿವೆ, ಇದು ಕಣ್ಣಿನ ಆರೋಗ್ಯಕ್ಕೆ ಮುಖ್ಯವಾಗಿದೆ. ಕಣ್ಣಿನ ಪೊರೆ ಮುಂತಾದ ಕಣ್ಣಿನ ಸಮಸ್ಯೆಗಳ ಅಪಾಯವನ್ನು ಕಡಿಮೆ ಮಾಡಲು ಇವು ಸಹಾಯ ಮಾಡುತ್ತವೆ.
ಚರ್ಮದ ಆರೋಗ್ಯಕ್ಕೆ ಒಳ್ಳೆಯದು: ಕಿವಿ ಹಣ್ಣಿನಲ್ಲಿರುವ ವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕಗಳು ಚರ್ಮದ ಆರೋಗ್ಯವನ್ನು ಸುಧಾರಿಸುತ್ತವೆ. ಕಾಲಜನ್ ಉತ್ಪಾದನೆಗೆ ವಿಟಮಿನ್ ಸಿ ಅತ್ಯಗತ್ಯ. ಇದು ಚರ್ಮವನ್ನು ಸುಂದರವಾಗಿ ಮತ್ತು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ. ಕಿವಿ ಹಣ್ಣುಗಳು ಕಡಿಮೆ ಗ್ಲೈಸೆಮಿಕ್ ಸೂಚ್ಯಂಕವನ್ನು ಹೊಂದಿವೆ. ಇದರರ್ಥ ಅವು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ತ್ವರಿತವಾಗಿ ಹೆಚ್ಚಿಸುವುದಿಲ್ಲ. ಮಧುಮೇಹ ಇರುವವರಿಗೆ ಅಥವಾ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಬಯಸುವವರಿಗೆ ಇದು ಉತ್ತಮ ಆಹಾರವಾಗಿದೆ.
Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳ ಮಾಹಿತಿಯನ್ನು ಆಧರಿಸಿದೆ. ಡೈಲಿ ವಾರ್ತೆ ನ್ಯೂಸ್ ಗೂ ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.