

ಡೈಲಿ ವಾರ್ತೆ: 01/ಮಾರ್ಚ್ /2025


ಚಾಮರಾಜನಗರ |ಕಾರು ಹಾಗೂ ಟಿಪ್ಪರ್ ನಡುವೆ ಭೀಕರ ರಸ್ತೆ ಅಪಘಾತ: ಮಂಡ್ಯ ಮೂಲದ ಐವರು ಮಾದಪ್ಪ ಭಕ್ತರ ದಾರುಣ ಸಾವು

ಚಾಮರಾಜನಗರ: ಕಾರು ಮತ್ತು ಟಿಪ್ಪರ್ ಮಧ್ಯೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಮೃತಪಟ್ಟ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದೆ.
ಕೊಳ್ಳೇಗಾಲ ತಾಲೂಕಿನ ಚಿಕ್ಕಿಂದುವಾಡಿ ಬಳಿಯ ಮುಖ್ಯರಸ್ತೆಯಲ್ಲಿ ಇಂದು ಬೆಳಗ್ಗೆ ಟಿಪ್ಪರ್ ಹಾಗೂ ಕಾರು ನಡುವೆ ಈ ಅಪಘಾತ ಸಂಭವಿಸಿದೆ.
ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ ಕಾರಿನಲ್ಲಿದ್ದ ಮೂವರು ಪುರುಷರು ಇಬ್ಬರು ಮಹಿಳೆಯರು ಮೃತಪಟ್ಟಿದ್ದು, ಅವರು ಮಂಡ್ಯ ಮೂಲದವರು ಎಂದು ಹೇಳಲಾಗುತ್ತಿದೆ.
ಮಲೆಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಶಿವರಾತ್ರಿ ಜಾತ್ರಾ ಮಹೋತ್ಸವದ ಮಹಾ ರಥೋತ್ಸವದಲ್ಲಿ ಪಾಲ್ಗೊಳ್ಳಲು ಇವರು ಕಾರಿನಲ್ಲಿ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ. ಅಪಘಾತ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.