ಡೈಲಿ ವಾರ್ತೆ: 02/ಮಾರ್ಚ್ /2025

ಕುಂದಾಪುರ ತಾಲೂಕು ಸರಕಾರಿ ಗ್ರೇಡ್ 1 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಉದಯ ಮಡಿವಾಳ ಎಂ ಆಯ್ಕೆ

ಕುಂದಾಪುರ – ಕೇಂದ್ರ ಚುನಾವಣಾಧಿಕಾರಿಗಳು ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಚೇರಿ, ಬೆಂಗಳೂರು ಇವರ ಚುನಾವಣಾ ಅಧಿಸೂಚನೆಯಂತೆ ಮುಂದಿನ ನಾಲ್ಕು ವರ್ಷಗಳ ಅವಧಿಗೆ ಕರ್ನಾಟಕ ರಾಜ್ಯ ಗ್ರೇಡ್ 1 ದೈಹಿಕ ಶಿಕ್ಷಣ ಶಿಕ್ಷಕರ ಸಂಘ(ರಿ) ಬೆಂಗಳೂರು ಈ ಸಂಘದ ಬೈಲಾ ನಿಯಮಾವಳಿ ಪ್ರಕಾರ ಕುಂದಾಪುರ ತಾಲೂಕು ಘಟಕದ ಸರಕಾರಿ ಗ್ರೇಡ್ 1 ದೈಹಿಕ ಶಿಕ್ಷಣ ಶಿಕ್ಷಕರ ಚುನಾವಣೆಯಲ್ಲಿ ಕುಂದಾಪುರ ತಾಲೂಕು ಸಂಘದ ಅಧ್ಯಕ್ಷರಾಗಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಕೋಟೇಶ್ವರದ ದೈಹಿಕ ಶಿಕ್ಷಣ ಶಿಕ್ಷಕರಾದ ಉದಯ ಮಡಿವಾಳ ಎಂ, ಉಪಾಧ್ಯಕ್ಷರಾಗಿ ಸರಕಾರಿ ಪ್ರೌಢಶಾಲೆ ವಕ್ವಾಡಿಯ ಕುಸುಮಾಕರ್ ಶೆಟ್ಟಿ, ಕಾರ್ಯದರ್ಶಿಯಾಗಿ ಸರಕಾರಿ ಪ್ರೌಢಶಾಲೆ ಹೆಸ್ಕುತೂರಿನ ಜಯಪ್ರಸಾದ್ ಶೆಟ್ಟಿ, ಸಂಘಟನಾ ಕಾರ್ಯದರ್ಶಿಯಾಗಿ ಸರ್ಕಾರಿ ಪ್ರೌಢಶಾಲೆ ಬಸ್ರೂರಿನ ಸುಧಾಕರ್ ಶೆಟ್ಟಿ, ಜಂಟಿ ಕಾರ್ಯದರ್ಶಿಯಾಗಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಬಿದ್ಕಲ್ ಕಟ್ಟೆಯ ರೇಷ್ಮಾ, ಖಜಾಂಚಿಯಾಗಿ ಸರಕಾರಿ ಪ್ರೌಢಶಾಲೆ ಬೀಜಾಡಿಯ ಉದಯ್ ಮೊಗವೀರ, ಆಯ್ಕೆಯಾಗಿದ್ದು ಕುಂದಾಪುರ ಕ್ಷೇತ್ರದ ಚುನಾವಣಾಧಿಕಾರಿ ಕುಂದಾಪುರ ಬೈಂದೂರು ಅಕ್ಷರ ದಾಸೋಹದ ಸಹಾಯಕ ನಿರ್ದೇಶಕರಾದ ಅರುಣ್ ಕುಮಾರ್ ಶೆಟ್ಟಿ ಇವರು ಈ ಮೇಲಿನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯನ್ನು ನಡೆಸಿ ಕೊಟ್ಟಿರುತ್ತಾರೆ.