

ಡೈಲಿ ವಾರ್ತೆ: 06/ಮಾರ್ಚ್ /2025


ನಿವೃತ್ತ ತಹಶಿಲ್ದಾರ್ ಕೆ.ಎಂ ಸಲೀಂ ಸಾಹೇಬ್ ಕೋಟ ನಿಧನ

ಕೋಟ: ಬ್ರಹ್ಮಾವರದ ನಿವೃತ್ತ ತಹಶೀಲ್ದಾರ್ ಕೆ.ಎಂ ಸಲೀಂ ಸಾಹೇಬ್ ಕೋಟ (79) ಅನಾರೋಗ್ಯದಿಂದ ಮಾ. 6 ರಂದು ಗುರುವಾರ ಬೆಳಿಗ್ಗೆ ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ.
ಇವರು ತಹಶಿಲ್ದಾರ್ ಆಗಿ ಕಾರ್ಯನಿರ್ವಹಿಸುವ ಸಂದರ್ಭದಲ್ಲಿ ಸಾಕಷ್ಟು ಕಾರ್ಯಕ್ರಮಗಳ ಮೂಲಕ ಜನಮನ್ನಣೆ ಪಡೆದಿದ್ದರು. ಕೋಟ ಜಾಮೀಯಾ ಮಸ್ಜಿದ್ ಹಾಲಿ ಅಧ್ಯಕ್ಷರಾಗಿದ್ದು, ಉಡುಪಿ ಮುಸ್ಲಿಂ ಒಕ್ಕೂಟದ ಮಾಜಿ ಉಪಾಧ್ಯಕ್ಷರಾಗಿ ಹತ್ತು ಹಲವು ಸಂಘ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಿದ್ದರು.
ಮೃತರು ಪತ್ನಿ, ಓರ್ವ ಪುತ್ರಿ ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ಇವರ ನಿಧನಕ್ಕೆ ಸಂಸದ ಕೋಟ ಶ್ರೀನಿವಾಸ್ ಪೂಜಾರಿ, ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ, ಶಾಸಕ ಕಿರಣ್ ಕುಮಾರ್ ಕೊಡ್ಗಿ, ಉಡುಪಿ ಮುಸ್ಲಿಂ ಒಕ್ಕೂಟದ ಮಾಜಿ ಅಧ್ಯಕ್ಷ ಕೋಟ ಇಬ್ರಾಹಿಂ ಸಾಹೇಬ್ , ಹಾಗೂ ಸಮುದಾಯದ ಮುಖಂಡರು ಮತ್ತು ಕೋಟ ಜಮಾತ್ ಬಾಂಧವರು ಸಂತಾಪ ಸೂಚಿಸಿದ್ದಾರೆ.