ಡೈಲಿ ವಾರ್ತೆ: 14/ಮಾರ್ಚ್ /2025

ಮಂಗಳೂರು: ಮ್ಯಾನೇಜರ್ ನಿಂದಲೇ ಬ್ಯಾಂಕ್ ಗೆ ವಂಚನೆ!

ಮಂಗಳೂರು: ಮ್ಯಾನೇಜರ್‌ ತಾನು ಕಾರ್ಯನಿರ್ವಹಿಸುತ್ತಿದ್ದ ಬ್ಯಾಂಕ್‌ಗೆ ವಂಚಿಸಿದ ಬಗ್ಗೆ ಸೆನ್‌ ಠಾಣೆಯಲ್ಲಿ ನಿನ್ನೆ ಪ್ರಕರಣ ದಾಖಲಾಗಿದೆ.

ಬ್ಯಾಂಕ್‌ ಆಫ್‌ ಬರೋಡಾದ ಕೊಣಾಜೆ ಬ್ರಾಂಚ್‌ನಲ್ಲಿ ಆರೋಪಿ ಡೆರಿಕ್‌ ಅಜಿತ್‌ ಡಿಸೋಜ ಎಂಬಾತ 2022ರ ಸೆಪ್ಟಂಬರ್‌ 22ರಿಂದ 2024ರ ಫೆಬ್ರವರಿ 7ರವರೆಗೆ ಮ್ಯಾನೇಜರ್‌ ಆಗಿದ್ದು, ಈ ಸಂದರ್ಭ ಬ್ಯಾಂಕಿನ ಹಿರಿಯ ನಾಗರಿಕರು ಠೇವಣಿಯಲ್ಲಿರಿಸಿದ್ದ ಹಣವನ್ನು ಖಾತೆದಾರರಿಗೆ ತಿಳಿಯದಂತೆ 1, 44, 71, 000 ರೂ. ವನ್ನು ಸಾಲ ರೂಪದಲ್ಲಿ ಇತರ ಆರೋಪಿತರ ಖಾತೆಗೆ ವರ್ಗಾಯಿಸಿದ್ದಾನೆ ಎನ್ನಲಾಗಿದೆ.