


ಡೈಲಿ ವಾರ್ತೆ: 15/ಮಾರ್ಚ್ /2025


ಉಡುಪಿ ಶ್ರೀಕೃಷ್ಣಮಠಕ್ಕೆ ಹಾಗೂ ಕಾಪು ಮಾರಿಗುಡಿ ದೇವಸ್ಥಾನಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಭೇಟಿ

ಉಡುಪಿ| ಉಡುಪಿ ಶ್ರೀಕೃಷ್ಣಮಠಕ್ಕೆ ಶನಿವಾರ ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಖಾತೆ ಸಚಿವ ಪ್ರಹ್ಲಾದ್ ಜೋಶಿ ಅವರು ಕುಟುಂಬ ಸಮೇತರಾಗಿ ಭೇಟಿ ನೀಡಿ ದೇವರ ದರ್ಶನ ಮಾಡಿದರು.
ಬಳಿಕ ಪರ್ಯಾಯ ಪುತ್ತಿಗೆ ಸುಗುಣೇಂದ್ರತೀರ್ಥ ಶ್ರೀಪಾದರನ್ನು ಭೇಟಿಯಾಗಿ ಅನುಗ್ರಹ ಮಂತ್ರಾಕ್ಷತೆ ಪಡೆದರು. ನಂತರ ಕೋಟಿಗೀತಾಲೇಖನ ಯಜ್ಞ ದೀಕ್ಷೆ ಸ್ವೀಕರಿಸಿದರು.

ಕೃಷ್ಣಮಠದಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದ ಜೋಶಿ, ಇದೊಂದು ಪ್ರೇರಣಾ ಸ್ಥಳ ಭಗವದ್ಗೀತೆ ಸಾರ್ವಕಾಲಿಕ ಸತ್ಯ. ಕೃಷ್ಣಮಠ ಅತ್ಯಂತ ಪುರಾತನ ದೇವಸ್ಥಾನಗಳಲ್ಲೊಂದಾಗಿದೆ. ಇಲ್ಲಿ ಪೇಜಾವರ ಶ್ರೀಗಳು ಕ್ರಾಂತಿಕಾರಿ ಬದಲಾವಣೆಗಳನ್ನು ತಂದಿದ್ದಾರೆ. ದೇವರ ದರ್ಶನ ಮಾಡಲು ನಾನು ಕುಟುಂಬ ಸಮೇತ ಇಲ್ಲಿಗೆ ಆಗಮಿಸಿದ್ದೇನೆ ಎಂದು ಹೇಳಿದರು.
ದೇವರ ದರ್ಶನಕ್ಕೆ ಆಗಮಿಸಿದ ಕೇಂದ್ರ ಸಚಿವರನ್ನು ಮಠದ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲೆಯ ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿದರು.
ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಯಶ್ಪಾಲ್ ಸುವರ್ಣ, ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ, ಮಂಗಳೂರು ವಿಭಾಗ ಪ್ರಭಾರಿ ಉದಯಕುಮಾರ್ ಶೆಟ್ಟಿ, ಮುಖಂಡರಾದ ಶಶಾಂಕ್ ಸರಳಾತ್ತಾಯ ಸಾಥ್ ನೀಡಿದರು.