ಡೈಲಿ ವಾರ್ತೆ: 17/ಮಾರ್ಚ್ /2025

ಕೋಮು ದ್ವೇಷ ಭಾಷಣ ಮಾಡಿದ್ದ ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು ದಾಖಲು

ಮಂಗಳೂರು: ಇತ್ತೀಚೆಗೆ ಕುತ್ತಾರಿನಲ್ಲಿ ನಡೆದ ಧಾರ್ಮಿಕ
ಕಾರ್ಯಕ್ರಮವೊಂದರಲ್ಲಿ ಕೋಮು ದ್ವೇಷದ ಭಾಷಣ ಮಾಡಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಪ್ರಯತ್ನಿಸಿದ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಕಾಂಗ್ರೆಸ್ ಮುಖಂಡರು ಮಾ.16ರ ರವಿವಾರ ಉಳ್ಳಾಲ ಠಾಣೆಗೆ ದೂರು ನೀಡಿದ್ದಾರೆ.

ಉಳ್ಳಾಲ ನಗರ ಕಾಂಗ್ರೆಸ್ ಅಧ್ಯಕ್ಷ ಮುಸ್ತಫಾ ಅಬ್ದುಲ್ಲಾ ಇದರ ನೇತೃತ್ವ ವಹಿಸಿದ್ದರು. ಈ ಸಂದರ್ಭ ಕಾಂಗ್ರೆಸ್ ಮುಖಂಡ ಉಸ್ಮಾನ್ ಕಲ್ಲಾಪು, ಅಯ್ಯಬ್ ಮಂಚಿಲ, ದಿನೇಶ್ ಕುಂಪಲ, ರಶೀದ್ ಯೂಸುಫ್, ರಹ್ಮಾನ್ ಕೋಡಿಜಾಲ್, ಚಂದ್ರಿಕಾ ರೈ, ಸುರೇಖಾ ಚಂದ್ರಹಾಸ್, ಅಬ್ದುಲ್ ಜಬ್ಬಾರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು