


ಡೈಲಿ ವಾರ್ತೆ: 19/ಮಾರ್ಚ್ /2025


ಮಂಗಳೂರು, ಸೋಶಿಯಲ್ ಡೆಮಾಕ್ರಟಿಕ್ ಆಟೋ ಚಾಲಕರ ಯೂನಿಯನ್ ವತಿಯಿಂದ ಸ್ನೇಹ ಸಮ್ಮಿಲನ ಹಾಗೂ ಇಫ್ತಾರ್ ಕೂಟ

ಮಂಗಳೂರು: ಸೋಶಿಯಲ್ ಡೆಮಾಕ್ರಟಿಕ್ ಆಟೋ ಚಾಲಕರ ಯೂನಿಯನ್ ಮಂಗಳೂರು ನಗರ ಸಮಿತಿ ಹಾಗೂ ಪಯೋನೀರ್ ಕಾಂಪ್ಲೆಕ್ಸ್ ವ್ಯಾಪಾರಸ್ಥರ ಸಂಘ ಇದರ ಜಂಟಿ ಆಶ್ರಯದಲ್ಲಿ ಸ್ನೇಹ ಸಮ್ಮಿಲನ ಹಾಗೂ ಇಫ್ತಾರ್ ಕೂಟ ಸಮಿತಿ ಅಧ್ಯಕ್ಷರಾದ ಇಲ್ಯಾಸ್ ಬೆಂಗ್ರೆ ರವರ ಅಧ್ಯಕ್ಷತೆಯಲ್ಲಿ ಪಾಯೋನೀರ್ ಕಾಂಪ್ಲೆಕ್ಸ್ ನ ನೆಲಮಹಡಿಯಲ್ಲಿ ನಡೆಯಿತು.
ಎಸ್.ಡಿ.ಟಿ.ಯು ಮಂಗಳೂರು ನಗರ ಜಿಲ್ಲಾಧ್ಯಕ್ಷರಾದ ಇರ್ಫಾನ್ ಕಾನ ಪ್ರಾಸ್ತಾವಿಕ ಮಾತನಾಡಿದರು.
ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದ ಎಸ್.ಡಿ.ಟಿ.ಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಹಿಮಾನ್ ಬೋಳಿಯರ್ ಆಟೋ ಚಾಲಕರು ಸಂಘಟಿತರಾಗಿ ಸಮಾಜಮುಖಿ ಕಾರ್ಯಗಳೊಂದಿಗೆ ಸಾರ್ವಜನಿಕವಾಗಿ ಇಫ್ತಾರ್ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ ಆಯೋಜಿಸಿದ್ದು ಮಾನವ ಸಂಬಂಧಗಳನ್ನು ಗಟ್ಟಿಗೊಳಿಸುವ ಸೌಹಾರ್ದದ ಸಂದೇಶ ನೀಡುತ್ತಿದೆ ಈ ನಿಟ್ಟಿನಲ್ಲಿ ಮಾನವೀಯ ಮೌಲ್ಯಗಳನ್ನು ಬೆಸೆಯಲು ಈ ಇಫ್ತಾರ್ ಪ್ರೇರಣೆಯಾಗಲಿ ಎಂದರು
ಎಸ್.ಡಿ.ಟಿ.ಯು ಮಂಗಳೂರು ನಗರ ಏರಿಯಾ ಅಧ್ಯಕ್ಷರಾದ ಇಕ್ಬಾಲ್ ಬಿಪಿ, ಮೊಡಲ್ ಇನ್ ಮೈಂಡ್ ಮಾಲಕರಾದ ಹಮೀದ್ ಷಾ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಮುಸ್ತಫಾ ಪರ್ಲಿಯಾ ಸ್ವಾಗತಿಸಿ ನಿರೂಪಿಸಿದರು