ಡೈಲಿ ವಾರ್ತೆ: 20/ಮಾರ್ಚ್ /2025

500 ರೂ. ನಕಲಿ ನೋಟು ಚಲಾವಣೆ ಇಬ್ಬರ ಬಂಧನ

ರಾಯಚೂರು| ಹೋಟೆಲ್‌ನಲ್ಲಿ ಬಿರಿಯಾನಿ ತಿಂದು ನಕಲಿ 500 ರೂ ನೋಟು ಚಲಾವಣೆ ಮಾಡಿದ್ದ ಇಬ್ಬರು ಆರೋಪಿಗಳನ್ನು ನಗರ ಪೊಲೀಸರು ಬಂಧಿಸಿದ್ದಾರೆ.

500ರೂ. ಮುಖಬೆಲೆಯ ನಕಲಿ ನೋಟು ಚಲಾವಣೆಗೆ ಮುಂದಾಗಿದ್ದ ಮಂಜುನಾಥ ಹಾಗೂ ರಮೇಶ್ ಬಂಧಿತ ಆರೋಪಿಗಳಾಗಿದ್ದಾರೆ, ಆರೋಪಿಗಳು ನಗರದ ಬಿರಿಯಾನಿ ಹೋಟೆಲ್ ವೊಂದರಲ್ಲಿ ಚಿಕನ್ ಬಿರಿಯಾನಿ ತಿಂದು 500 ರೂ. ಬಿಲ್ ಪಾವತಿಸಿದ್ದರು. ಸ್ವಲ್ಪ ಹೊತ್ತಿನ ಬಳಿಕ ಅನುಮಾನ ಬಂದು ಹೋಟೆಲ್ ಮಾಲೀಕ ನೋಟು ಪರಿಶೀಲಿಸಿದಾಗ ಅಸಲಿಯತ್ತು ಬಯಲಾಗಿದೆ.

ಮನೋರಂಜನೆಗಾಗಿ ಬಳಸುವ ಚಿಲ್ಡ್ರನ್ ಬ್ಯಾಂಕ್ ಆಫ್ ಇಂಡಿಯಾ ಎಂದು ನಮೂದಿಸಿದ್ದ ನಕಲಿ ನೋಟನ್ನು ಆರೋಪಿಗಳು ಬಿಲ್ ಪಾವತಿಗೆ ಬಳಸಿದ್ದರು. ಹೋಟೆಲ್ ಮಾಲೀಕ ಮಾರ್ಕೆಟ್ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಇಬ್ಬರು ಆರೋಪಿಗಳನ್ನ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.