


ಡೈಲಿ ವಾರ್ತೆ: 21/ಮಾರ್ಚ್ /2025


ಮಲ್ಪೆ| ದಲಿತ ಮಹಿಳೆಗೆ ಹಲ್ಲೆ ಪ್ರಕರಣ: ಐವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

ಉಡುಪಿ: ದಲಿತ ಮಹಿಳೆಯನ್ನು ಕಟ್ಟಿ ಹಾಕಿ ಹಲ್ಲೆ ನಡೆಸಿದ ಪ್ರಕರಣದಲ್ಲಿ ಬಂಧಿತ ಐವರು ಆರೋಪಿಗಳಿಗೆ ಎ.2ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ನೀಡಿದೆ.
ಮಾರ್ಚ್ 19ರಂದು ಬಂಧಿಸಿದ ಆರೋಪಿಗಳಾದ ಲಕ್ಷ್ಮಿ, ಶಿಲ್ಪ, ಸುಂದರ್ ಅವರನ್ನು ಅದೇ ದಿನ ರಾತ್ರಿ ನ್ಯಾಯಾಧೀಶರ ಮನೆ ಮುಂದೆ ಹಾಜರುಪಡಿಸಿದ್ದು ಮೂವರನ್ನು ಎ.2ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.
ಇದೀಗ ಇಬ್ಬರನ್ನು ಬಂಧಿಸಿದ ಆರೋಪಿಗಳಾದ ಪಾರ್ವತಿ ಹಾಗೂ ಲೀಲಾ ಅವರನ್ನು ಕೂಡ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು ಅವರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ತಿಳಿದು ಬಂದಿದೆ.