


ಡೈಲಿ ವಾರ್ತೆ: 23/ಮಾರ್ಚ್ /2025


ಉಡುಪಿ| ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಲಾರಿ ಪಲ್ಟಿ – ಆರು ಮಂದಿಗೆ ಗಾಯ

ಉಡುಪಿ: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಲಾರಿ ಪಲ್ಟಿ ಹೊಡೆದ ಘಟನೆ ಭಾನುವಾರ ಮಧ್ಯಾಹ್ನ ರಾಷ್ಟ್ರೀಯ ಹೆದ್ದಾರಿ 66ರ ಸಂತೆಕಟ್ಟೆಯ ಆಶೀರ್ವಾದ ಬಳಿ ಸಂಭವಿಸಿದೆ.
ಗುಜಿರಿ ಸಾಮಗ್ರಿಗಳನ್ನು ಕೊಂಡೊಯ್ಯುತ್ತಿದ್ದ ಲಾರಿಗೆ ದ್ವಿಚಕ್ರ ವಾಹನವೊಂದು ಅಡ್ಡ ಬಂದ ಕಾರಣ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಲಾರಿ ಚಾಲಕ ತಕ್ಷಣ ಬ್ರೇಕ್ ಹಾಕಿದ್ದರಿಂದ ಲಾರಿ ಪಲ್ಟಿಯಾಗಿದೆ.

ಅಪಘಾತದಲ್ಲಿ ಲಾರಿ ಚಾಲಕ, ಲಾರಿಯಲ್ಲಿದ್ದ ಕಾರ್ಮಿಕರು ಹಾಗೂ ಬೈಕ್ ಸವಾರ ಸೇರಿ ಒಟ್ಟು ಆರು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣ ಸ್ಥಳೀಯರು ಉಡುಪಿಯ ಖಾಸಗಿ ಆಸ್ಪತ್ರೆಗೆ ಸಾಗಿಸಿರುತ್ತಾರೆ.
ಅಪಘಾತದಲ್ಲಿ ಬೈಕ್ ಲಾರಿಯ ಅಡಿಗೆ ಬಿದ್ದು ನಜ್ಜುಗುಜ್ಜಾಗಿದೆ.
ಉಡುಪಿ ಸಂಚಾರ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿ ಕೊಂಡಿದ್ದಾರೆ.