ಡೈಲಿ ವಾರ್ತೆ: 28/ಮಾರ್ಚ್ /2025

ಬಜ್ಪೆ| ಅಕ್ರಮ ಜಾನುವಾರು ಸಾಗಾಟಕ್ಕೆ: ಬಜರಂಗದಳ ಕಾರ್ಯಾಚರಣೆ, 25 ಗೋ ಗಳ ರಕ್ಷಣೆ

ಮಂಗಳೂರು: ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ಗೂಡ್ಸ್ ವಾಹನವನ್ನು ಬಜರಂಗದಳದ
ಕಾರ್ಯಕರ್ತರು ತಡೆದು ಪೊಲೀಸರಿಗೆ ಒಪ್ಪಿಸಿ 25 ಗೋ ಗಳನ್ನು ರಕ್ಷಣೆ ಮಾಡಿದ ಘಟನೆ
ಮಾ. 28 ರಂದು ಶುಕ್ರವಾರ ನಗರದ ಹೊರವಲಯದ ಬಜ್ಪೆ ಸುರಲ್ಪಾಡಿಯಲ್ಲಿ ನಡೆದಿದೆ.

ಅಕ್ರಮವಾಗಿ ಗೋವುಗಳನ್ನು ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ವಾಹನವನ್ನು ತಡೆದು ಪರಿಶೀಲನೆ ನಡೆಸಿದ ವೇಳೆ ಗೂಡ್ಸ್ ವಾಹನದಲ್ಲಿ ಕಾಲುಗಳನ್ನು ಕಟ್ಟಿ ಅಮಾನುಷವಾಗಿ 25 ಗೋವುಗಳನ್ನು ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ.

ಘಟನೆ ವೇಳೆ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಕೂಡಲೇ ವಾಹನದಲ್ಲಿದ್ದ ಗೋವುಗಳನ್ನು ರಕ್ಷಣೆ ಮಾಡಿದ ಕಾರ್ಯಕರ್ತರು ವಾಹನವನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಘಟನೆ ಸಂಬಂಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.