


ಡೈಲಿ ವಾರ್ತೆ: 28/ಮಾರ್ಚ್ /2025


ಕೊಡಗು| 6 ವರ್ಷದ ಕಂದಮ್ಮ ಸೇರಿ ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ!

ಕೊಡಗು: ಆರು ವರ್ಷದ ಕಂದಮ್ಮ ಸೇರಿ ಒಂದೇ ಕುಟುಂಬದ ನಾಲ್ವರನ್ನು ಕತ್ತಿಯಿಂದ ಕಡಿದು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಪೊನ್ನಂಪೇಟೆಯ ಬೇಗೂರಿನ ಕುಳತೋಡು ಗ್ರಾಮದಲ್ಲಿ ನಡೆದಿದೆ.
ಹತ್ಯೆಗೀಡಾದವರನ್ನು ಗಿರೀಶ್ ತನ್ನ ಮಾವ ಕರಿಯ(75), ಅತ್ತೆ ಗೌರಿ(70), ಪತ್ನಿ ನಾಗಿ(30) ಹಾಗೂ ಪುತ್ರಿ ಕಾವೇರಿ(5) ಎಂದು ಗುರುತಿಸಲಾಗಿದ್ದು, ಆರೋಪಿಯನ್ನು ಕೇರಳ ಮೂಲದ ಗಿರೀಶ್(35) ಎಂದು ಗುರುತಿಸಲಾಗಿದೆ.
ನಾಗಿಯೊಂದಿಗೆ ಗಿರೀಶ್ ಮೂರನೇ ಮದುವೆಯಾಗಿ ತೋಟದ ಮನೆಯಲ್ಲೇ ಜೀವನ ನಡೆಸುತ್ತಿದ್ದ. ಇನ್ನೂ ಕಾಫಿ ಬೀಜ ಮಾರಾಟ ಮಾಡಿದ ಹಣದ ವಿಚಾರಕ್ಕಾಗಿ ನಾಲ್ವರ ನಡುವೆ ಗಲಾಟೆ ನಡೆಯುತ್ತಿತ್ತು. ಅಲ್ಲದೇ ಅನೈತಿಕ ಸಂಬಂಧದ ಹಿನ್ನೆಲೆಯಲ್ಲೂ ಗಲಾಟೆ ನಡೆದಿತ್ತು ಎನ್ನಲಾಗಿದೆ.
ಏಳು ವರ್ಷಗಳ ಹಿಂದೆ ಗಿರೀಶ್ ಹಾಗೂ ನಾಗಿ ವಿವಾಹವಾಗಿದ್ದು, ಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಆದರೆ ಅಕ್ರಮ ಸಂಬಂಧ ಹಿನ್ನೆಲೆಯಲ್ಲಿ ಸರಣಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದರೂ, ನಿಖರ ಕಾರಣ ತಿಳಿದುಬಂದಿಲ್ಲ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಜರಾಮನ್ ಹಾಗೂ ಪೊನ್ನಂಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ:7483811728, 8971945601