


ಡೈಲಿ ವಾರ್ತೆ: 28/ಮಾರ್ಚ್ /2025


ಮಾರ್ಚ್ 29 ; ರಮಾನಾಥ ರೈ ನೇತೃತ್ವದಲ್ಲಿ ಸೌಹಾರ್ದ ಇಫ್ತಾರ್ ಕೂಟ

ಬಂಟ್ವಾಳ : ಮಾಜಿ ಸಚಿವ ಬಿ. ರಮಾನಾಥ ರೈ ನೇತೃತ್ವದಲ್ಲಿ ಸೌಹಾರ್ದ ಇಫ್ತಾರ್ ಕೂಟ* ವು ಮಾರ್ಚ್ 29 ರಂದು ಪಾಣೆಮಂಗಳೂರು ಸಾಗರ್ ಆಡಿಟೋರಿಯಂ ನಲ್ಲಿ ನಡೆಯಲಿದೆ.
ಈ ಪ್ರಯುಕ್ತ ಸಂಜೆ 5.30 ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದ್ದು ವಿವಿಧ ಧರ್ಮಗಳ ಧಾರ್ಮಿಕ ಗುರುಗಳು , ರಾಜಕೀಯ, ಸಾಮಾಜಿಕ ಮುಖಂಡರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.