ಡೈಲಿ ವಾರ್ತೆ: 31/ಮಾರ್ಚ್ /2025
ಕರಾವಳಿಯಲ್ಲಿ ರಂಜಾನ್ ಸಂಭ್ರಮ: ಸಾಮೂಹಿಕ ಪ್ರಾರ್ಥನೆಯಲ್ಲಿ ವಿಧಾನಸಭೆ ಸ್ಪೀಕರ್ ಖಾದರ್ ಭಾಗಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಂಜಾನ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಜಿಲ್ಲೆಯ ಅನೇಕ ಮಸೀದಿಗಳಲ್ಲಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ವಿಶೇಷ ಪ್ರಾರ್ಥನೆ, ನಮಾಜ್ ನೆರವೇರಿತು.

ಮಂಗಳೂರಿನ ಬಾವುಟಗುಡ್ಡೆ ಈದ್ಗಾ ಮಸೀದಿಯಲ್ಲಿ ವಿಶೇಷ ನಮಾಜ್ ನೆರೆವೇರಿತು. ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಕೂಡ ವಿಶೇಷ ಪ್ರಾರ್ಥನೆಯಲ್ಲಿ ಭಾಗವಹಿಸಿ ಶುಭ ಹಾರೈಸಿದರು. ಮುಸ್ಲಿಮರು ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.