

ಡೈಲಿ ವಾರ್ತೆ: 04/ಏಪ್ರಿಲ್ /2025


ಉಪ್ಪಿನಂಗಡಿ| ಬೆಂಗಳೂರಿನಿಂದ ಮಂಗಳೂರು ಬರುತ್ತಿದ್ದ ಬಸ್ ಪಲ್ಟಿ, ಓರ್ವ ಮೃತ್ಯು, ಹಲವರಿಗೆ ಗಾಯ

ಉಪ್ಪಿನಂಗಡಿ : ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿದ್ದ ಖಾಸಗಿ ಬಸ್ಸೊಂದು ಬಜತ್ತೂರು ಗ್ರಾಮದ ನೀರಕಟ್ಟೆ ಎಂಬಲ್ಲಿ ಪಲ್ಟಿಯಾಗಿ ಓರ್ವ ಪ್ರಯಾಣಿಕ ಮೃತಪಟ್ಟು ಹಲವರು ಗಾಯಗೊಂಡಿರುವ ಘಟನೆ ಎ.4 ರಂದು ಶುಕ್ರವಾರ ಮುಂಜಾನೆ ಸಂಭವಿಸಿದೆ.
ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೃತರ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ. ಕ್ರೈನ್ ಬಳಸಿ ಬಸ್ಸನ್ನು ಮೇಲಕ್ಕೆತ್ತಲಾಗಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.