ಡೈಲಿ ವಾರ್ತೆ: 04/ಏಪ್ರಿಲ್ /2025

ಬೈಂದೂರು: ಆಟೋ ರಿಕ್ಷಾಕ್ಕೆ ಕಾರು ಡಿಕ್ಕಿ, ಚಾಲಕ ಗಂಭೀರ

ಬೈಂದೂರು: ಉಡುಪಿ ಜಿಲ್ಲೆಯ ಗಂಗೊಳ್ಳಿಯ ಮುಳ್ಳಿಕಟ್ಟೆ ಸಮೀಪದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಆಟೋರಿಕ್ಷಾ ಮತ್ತು ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ಆಟೋ ಚಾಲಕ ಗಂಭೀರ ಗಾಯ ಗೊಂಡ ಘಟನೆ ನಡೆದಿದೆ.

ಗಂಭೀರ ಗಾಯ ಗೊಂಡ ಆಟೋ ಚಾಲಕ ಬಾಬು ಪೂಜಾರಿ ಎಂದು ಗುರುತಿಸಲಾಗಿದೆ. ಇವರನ್ನು ತಕ್ಷಣ ಸ್ಥಳೀಯರು ಆಸ್ಪತ್ರೆಗೆ ಸಾಗಿಸಿರುತ್ತಾರೆ.

ಬೈಂದೂರಿಂದ ಮಂಗಳೂರು ಹೋಗುತ್ತದೆ ಕಾರ್ ಹಾಗೂ ಆಟೋ ರಿಕ್ಷಾ ನಡುವೆ ಅಪಘಾತ ಸಂಭವಿಸಿದೆ.

ಘಟನೆ ಸ್ಥಳಕ್ಕೆ ಗಂಗೊಳ್ಳಿ ಪೊಲೀಸ್ ಠಾಣಾ ಅಧಿಕಾರಿ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಅಪಘಾತ ಪ್ರಕರಣ ದಾಖಲಿಸಿಕೊಂಡಿದ್ದಾರೆ.