

ಡೈಲಿ ವಾರ್ತೆ: 06/ಏಪ್ರಿಲ್ /2025


ಕೋಟದಲ್ಲಿ ಶ್ರೀ ರಾಮೋತ್ಸವದ ಅಂಗವಾಗಿ ಭಕ್ತಿರಥ ಯಾತ್ರೆ

ಕೋಟ: ಶ್ರೀ ಪೇಜಾವರ ಅಧೋಕ್ಷಜ ಮಠದ ಶ್ರೀ ರಾಮೋತ್ಸವದ ಅಂಗವಾಗಿ ಭಕ್ತಿರಥ ಯಾತ್ರೆಯು ರಾಮ ನವಮಿಯ ಈ ಪುಣ್ಯ ದಿನದಂದು ನಮ್ಮೂರು ಕೋಟಕ್ಕೆ ಆಗಮಿಸಿದ ಸಂದರ್ಭದಲ್ಲಿ ಭಕ್ತಿಪೂರ್ವಕವಾಗಿ ಪೂಷ್ಪಾರ್ಚನೆಗೈದು ಸ್ವಾಗತಿಸಲಾಯಿತು.
ಈ ಸಂಧರ್ಭದಲ್ಲಿ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿಯವರು, ಕೋಟ ಗ್ರಾಮಪಂಚಾಯತ್ ಪೂರ್ವಾಧ್ಯಕ್ಷರಾದ ಅಜಿತ್ ದೇವಾಡಿಗ, ಪ್ರಸ್ತುತ ಉಪಾಧ್ಯಕ್ಷರಾದ ಪಾಂಡು ಪೂಜಾರಿ, ಸಂಸದರ ಆಪ್ತ ಸಹಾಯಕರಾದ ಹರೀಶ್ ಕುಮಾರ್ ಶೆಟ್ಟಿ, ತೆಕ್ಕಟ್ಟೆ ಗ್ರಾಮ ಪಂಚಾಯತ್ ಸದಸ್ಯರಾದ ವಿನೋದ್ ದೇವಾಡಿಗ, ಬಿಜೆಪಿ ಪಕ್ಷದ ಮುಖಂಡರಾದ ಪ್ರಸಾದ್ ಬಿಲ್ಲವ, ಸಂತೋಷ್ ತೆಕ್ಕಟ್ಟೆ, ಬಾಳೆಬೆಟ್ಟು ಫ್ರೆಂಡ್ಸ್ ಸದಸ್ಯರು ಹಾಗೂ ಕೋಟ ಹಿಂದೂ ಸಂಘಟನೆಯ ಮುಖಂಡರು, ಸ್ಥಳೀಯರು ಪಾಲ್ಗೊಂಡಿದ್ದರು.