ಡೈಲಿ ವಾರ್ತೆ: 06/ಏಪ್ರಿಲ್ /2025

ಗಂಗೊಳ್ಳಿ: ಬೈಕೊಂದು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ – ಓರ್ವ ಸಾವು, ಇನ್ನೊರ್ವ ಗಂಭೀರ

ಕುಂದಾಪುರ: ಬೈಕೊಂದು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿ ಇನ್ನೊರ್ವ ಗಂಭೀರ ಗಾಯ ಗೊಂಡ ಘಟನೆ ತ್ರಾಸಿ – ಗಂಗೊಳ್ಳಿ ಸಂಪರ್ಕಿಸುವ ಗುಜ್ಜಾಡಿ ಗ್ರಾಮದ ಕೊಡಪಾಡಿ ಶ್ರೀ ಮಾರಿಕಾಂಬೆ ದೇವಸ್ಥಾನ ಮುಖ್ಯರಸ್ತೆಯಲ್ಲಿ ನಡೆದಿದೆ.

ಬೈಕ್ ಸವಾರರು ಮದುವೆ ಮುಗಿಸಿ ಮರಳಿ ಮನೆಗೆ ಹೋಗುವ ವೇಳೆ ಇನ್ನೊಂದು ಬೈಕ್ ಓವರ್ ಟೆಕ್ ಮಾಡುವ ಭರದಲ್ಲಿ ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಓರ್ವ ಸಾವನ್ನಪ್ಪಿದ್ದು, ಇನ್ನೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ.

ಗಂಭೀರ ಗಾಯಗೊಂಡ ಬೈಕ್ ಸವಾರನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಅಪಘಾತ ಪ್ರಕರಣ ದಾಖಲಾಗಿದೆ.