

ಡೈಲಿ ವಾರ್ತೆ: 07/ಏಪ್ರಿಲ್/2025


ಏ. 8 ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ರಿಸಲ್ಟ್ ವೀಕ್ಷಿಸಲು ಇಲ್ಲಿದೆ ಲಿಂಕ್

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಮಂಗಳವಾರ ಮದ್ಯಾಹ್ನ ಪ್ರಕಟವಾಗಲಿದೆ. ರಾಜ್ಯದಾದ್ಯಂತ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಮಂಗಳವಾರ ಮದ್ಯಾಹ್ನ 1.30 ಕ್ಕೆ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ.
ದ್ವಿತೀಯ ಪಿಯುಸಿ ಪರಿಕ್ಷೆ ಕಳೆದ ಮಾರ್ಚ್ 1 ರಿಂದ ಆರಂಭಗೊಂಡು ಮಾರ್ಚ್ 20 ರಂದು ಮುಕ್ತಾಯಗೊಂಡಿತ್ತು. ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನವನ್ನು ತ್ವರಿತಗತಿಯಲ್ಲಿ ನಡೆಸಿ ಏಪ್ರಿಲ್ 8ರಂದು ಫಲಿತಾಂಶ ಘೋಷಣೆ ಮಾಡಲಾಗುತ್ತದೆ.
ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ನಾಳೆ ಮಧ್ಯಾಹ್ನ 12.30ಕ್ಕೆ ಶಾಲಾ ಶಿಕ್ಷಣ ಮತ್ತು ಮೌಲ್ಯ ನಿರ್ಣಯ ಮಂಡಳಿ ಕಚೇರಿಯಲ್ಲಿ ಫಲಿತಾಂಶ ಪ್ರಕಟಿಸಲಿದ್ದಾರೆ.
ವಿದ್ಯಾರ್ಥಿಗಳು ಪರೀಕ್ಷೆಯ ಫಲಿತಾಂಶವನ್ನು http://karresults.nic.in ಜಾಲತಾಣದಲ್ಲಿ ವೀಕ್ಷಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.