ಡೈಲಿ ವಾರ್ತೆ: 10/ಏಪ್ರಿಲ್/2025

ಹುಬ್ಬಳ್ಳಿ|ಕೆಎಂಸಿಆರ್‌ಐ ಆಸ್ಪತ್ರೆಯ 3ನೇ ಮಹಡಿಯಿಂದ ಜಿಗಿದು ರೋಗಿ ಆತ್ಮಹತ್ಯೆ

ಹುಬ್ಬಳ್ಳಿ: ತೀವ್ರ ಜ್ವರದಿಂದ ಬಳಲಿ ಇಲ್ಲಿನ ಕೆಎಂಸಿಆರ್‌ಐ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿಯೊಬ್ಬ ಆಸ್ಪತ್ರೆಯ 3ನೇ ಅಂತಸ್ತಿನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಎ.10ರ ಗುರುವಾರ ನಡೆದಿದೆ.

ಆದರ್ಶ ಗೌಂಡಕರ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ.

ಜ್ವರದ ಹಿನ್ನಲೆ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಬೆಳಗ್ಗೆ 4 ಗಂಟೆ ಸುಮಾರಿಗೆ ಆಸ್ಪತ್ರೆಯ ಮೂರನೇ ಮಹಡಿಯ ಕಿಟಕಿ ಮೂಲಕ ಜಿಗಿದು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ನಂತರ ಆತನನ್ನು ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ನೀಡಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.

ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಹುಬ್ಬಳ್ಳಿಯ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.