ಡೈಲಿ ವಾರ್ತೆ: 11/ಏಪ್ರಿಲ್/2025

ತುಂಬೆ ಕಾಲೇಜಿಗೆ ಉತ್ತಮ ಫಲಿತಾಂಶ

2024-25 ರ ಶೈಕ್ಷಣಿಕ ಸಾಲಿನಲ್ಲಿ 93% ದೊಂದಿಗೆ ತುಂಬೆ ಪದವಿ ಪೂರ್ವ ಕಾಲೇಜಿಗೆ ದ್ವಿತೀಯ ಪಿಯುಸಿಯಲ್ಲಿ ಉತ್ತಮ ಫಲಿತಾಂಶ ಬಂದಿರುತ್ತದೆ.

ವಿಜ್ಞಾನ ವಿಭಾಗದಲ್ಲಿ 66 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 63 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಮೊಹಮ್ಮದ್ ಸಿನಾನ್ 568 ಅಂಕಗಳೊಂದಿಗೆ ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ, 11 ಮಂದಿ ಡಿಸ್ಟಿಂಕ್ಶನ್, 46 ಮಂದಿ ಪ್ರಧಮ ಸ್ಥಾನದಲ್ಲಿ ತೇರ್ಗಡೆಯಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 68 ಮಂದಿ ಹಾಜರಾಗಿ 63 ವಿದ್ಯಾರ್ಥಿಗಳು ತೇರ್ಗಡೆಯಾಗಿ ವಿದ್ಯಾರ್ಥಿನಿ ಕು.ನಮ್ರತಾ 547 ಅಂಕಗಳೊಂದಿಗೆ ಕಾಲೇಜಿನಲ್ಲಿ ಪ್ರಥಮ ಸ್ಥಾನ ಹಾಗೂ ನಾಲ್ಕು ಡಿಸ್ಟಿಂಕ್ಶನ್, 34 ವಿದ್ಯಾರ್ಥಿಗಳು ಫಸ್ಟ್ ಕ್ಲಾಸ್ ಅಂಕಗಳೊಂದಿಗೆ ಉತ್ತೀರ್ಣರಾಗಿರುತ್ತಾರೆ. ಹಾಗೂ ಕಲಾ ವಿಭಾಗದಲ್ಲಿ 15 ವಿದ್ಯಾರ್ಥಿಗಳಲ್ಲಿ 12 ವಿದ್ಯಾರ್ಥಿಗಳು ಉತ್ತೀರ್ಣರಾಗಿ 6 ವಿದ್ಯಾರ್ಥಿಗಳು ಫಸ್ಟ್ ಕ್ಲಾಸ್ ಹಾಗೂ ಕು.ಮೆಹರುನ್ನೀಸಾ 493 ಅಂಕಗಳನ್ನು ಗಳಿಸಿ ಕಾಲೇಜಿಗೆ ಪ್ರಥಮ ಸ್ಥಾನವನ್ನು ಗಳಿಸಿರುತ್ತಾರೆ.