ಡೈಲಿ ವಾರ್ತೆ: 12/ಏಪ್ರಿಲ್/2025

ನಾರಾವಿ: ಬೈಕ್ ಮರಕ್ಕೆ ಡಿಕ್ಕಿ- ಇಬ್ಬರು ಯುವಕರು ಸ್ಥಳದಲ್ಲೇ ಸಾವು

ಬೆಳ್ತಂಗಡಿ: ಬೈಕ್ ಸವಾರನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಾರಾವಿ ಕುತ್ಲೂರು ಗ್ರಾಮದ ಪುರುಷರ ಗುಡ್ಡೆ ಬಳಿ ಶುಕ್ರವಾರ ತಡರಾತ್ರಿ ಸಂಭವಿಸಿದೆ.

ಮೃತರನ್ನು ಪ್ರಶಾಂತ್ ಹಾಗೂ ದಿನೇಶ್ ಎಂದು ಗುರುತಿಸಲಾಗಿದೆ.

ಕುತ್ಲೂರು ಪುರುಷ ಗುಡ್ಡೆ ಸಮೀಪ ಕೊಕ್ರಾಡಿ ನಾರಾವಿ ರಸ್ತೆಯಲ್ಲಿ ಬೈಕ್‌ ನಿಯಂತ್ರಣ ಕಳೆದುಕೊಂಡು ಮರಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ್ದು ಪರಿಣಾಮ ಇಬ್ಬರು ಗಂಭೀರ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ರಾತ್ರಿಯ ವೇಳೆ ಯಾವುದೋ ಕಾರ್ಯಕ್ರಮ ಮುಗಿಸಿ ಹಿಂತಿರುಗುವ ವೇಳೆ ರಾತ್ರಿ ಹನ್ನೆರಡು ಗಂಟೆಯ ಸುಮಾರಿಗೆ ಅಪಘಾತ ಸಂಭವಿಸಿರುವುದಾಗಿ ತಿಳಿದು ಬಂದಿದೆ. ವೇಣೂರು ಪೋಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.