


ಡೈಲಿ ವಾರ್ತೆ: 13/ಏಪ್ರಿಲ್/2025


ಹುಬ್ಬಳ್ಳಿ| 5 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಿರುಚಾಡಿದಕ್ಕೆ ಕೊಲೆ

ಹುಬ್ಬಳ್ಳಿ: ಸೈಕೋಪಾತ್ ಒಬ್ಬ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿಯ ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬಿಹಾರ ಮೂಲದ ಸೈಕೋಪಾತ್ ಬಾಲಕಿಯನ್ನ ಶೆಡ್‌ಗೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಬಾಲಕಿ ಚೀರಾಟ ಕೇಳಿ ಅಲ್ಲೇ ಇದ್ದ ಸ್ಥಳೀಯರು ಶೆಡ್‌ನತ್ತ ಬಂದಿದ್ದಾರೆ.
ಜನ ಬರುತ್ತಿರುವುದನ್ನು ಕಂಡ ಸೈಕೋಪಾತ್ ಭಯದಿಂದ ಬಾಲಕಿಯ ಕತ್ತು ಹಿಸುಕಿ ಕೊಲೆ ಮಾಡಿ, ಎಸ್ಕೇಪ್ ಆಗಿದ್ದಾನೆ.
ಬಾಲಕಿ ಹತ್ಯೆ ಖಂಡಿಸಿ ಠಾಣೆ ಮುಂದೆ ಪ್ರತಿಭಟನೆ:
ಇನ್ನೂ 5 ವರ್ಷದ ಬಾಲಕಿ ಹತ್ಯೆ ಖಂಡಿಸಿ, ಆಕ್ರೋಶಗೊಂಡಿರುವ ಬಾಲಕಿ ಪೋಷಕರು ಹಾಗೂ ಸ್ಥಳೀಯರು ಅಶೋಕನಗರ ಠಾಣೆ ಎದುರು ಪ್ರತಿಭಟನೆ ನಡೆಸಿದರು. ಆರೋಪಿಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿದ್ದಾರೆ. ಈ ಬೆನ್ನಲ್ಲೇ ಸ್ಥಳಕ್ಕಾಗಮಿಸಿರುವ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಪರಿಸ್ಥಿತಿ ನಿಯಂತ್ರಿಸಲು ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿದ್ದಾರೆ.
ಮತ್ತೆ ಬಾಲಕಿ ಕೊಲೆ ಸಂಬಂಧ ಮಾಧ್ಯಮಗಳೊಂದಿಗೆ ಮಾತನಾಡಿರುವ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್, ಬಾಲಕಿ ಪೋಷಕರು ಕೊಪ್ಪಳ ಮೂಲದವರಾಗಿದ್ದು, ಕೊಲಿ ಕೆಲಸ ಮಾಡುತ್ತಿದ್ದರು. ತಂದೆ ಪೇಟಿಂಗ್ ಕೆಲಸ, ತಾಯಿ ಮನೆಗೆಲಸ ಮಾಡಿಕೊಂಡಿದ್ದರು. ಸದ್ಯಕ್ಕೆ ಆರೋಪಿ ಹಿನ್ನೆಲೆ ತಿಳಿದುಬಂದಿಲ್ಲ, ಬಾಲಕಿಯ ಮೇಲೆ ದೌಜನ್ಯದ ಬಗ್ಗೆ ಪರಿಶೀಲನೆ ನಡೆದಿದೆ. ಆರೋಪಿ ಬಾಲಕಿ ಜೊತೆ ಯಾವ ವರ್ತನೆ ಮಾಡಿದ್ದಾನೆಂಬುದರ ಕುರಿತು ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.
ಇಂದು ಬೆಳಗ್ಗೆ ತಾಯಿ ಮನೆಗೆಲಸಕ್ಕೆ ಹೋಗುವಾಗ ಮಗುವನ್ನೂ ಕರೆದುಕೊಂಡು ಹೋಗಿದ್ದರು. ತಾಯಿ ಮನೆಯೊಳಗೆ ಕೆಲಸ ಮಾಡುವ ಸಮಯದಲ್ಲಿ ಯುವಕನೋರ್ವ ಮಗುವನ್ನು ಎತ್ತಿಕೊಂಡು ಹೋಗಿದ್ದಾನೆ. ಪಾಳು ಬಿದ್ದ ಕೋಣೆಯಲ್ಲಿ ಮಗುವಿನ ಶವ ಪತ್ತೆಯಾಗಿದೆ. ಆರೋಪಿಯ ಹಿನ್ನೆಲೆ ಇನ್ನು ಗೊತ್ತಾಗಿಲ್ಲ. ರೇಪ್ ಬಗ್ಗೆ ಇನ್ನೂ ಮಾಹಿತಿ ಇಲ್ಲ, ವೈದ್ಯಕೀಯ ತಪಾಸಣೆ ನಂತರ ಅತ್ಯಾಚಾರದ ಬಗ್ಗೆ ತಿಳಿಯಲಿದೆ. ಈ ಬಗ್ಗೆ ಕುಟುಂಬಸ್ಥರಿಂದ ದೂರು ಪಡೆದು ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.