ಡೈಲಿ ವಾರ್ತೆ: 13/ಏಪ್ರಿಲ್/2025

ಕೋಟ| ಕಾರು ಡಿಕ್ಕಿ ಪಾದಚಾರಿ ಮಹಿಳೆ ಮೃತ್ಯು

ಕೋಟ: ಕಾರು ಡಿಕ್ಕಿ ಹೊಡೆದು ಪಾದಚಾರಿ ಮಹಿಳೆ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಕೋಟ ಮಣೂರು ರಾಜಲಕ್ಷ್ಮಿ ಸಭಾ ಭವನ ಬಳಿ ಭಾನುವಾರ ಸಂಜೆ ನಡೆದಿದೆ.

ಮೃತಪಟ್ಟ ಮಹಿಳೆ ಗಿಳಿಯಾರು ಹೊನ್ನಾರಿಯ ಗಿರಿಜಾ ಪೂಜಾರ್ತಿ (65) ಎಂದು ಗುರುತಿಸಲಾಗಿದೆ.

ಬನ್ನಾಡಿಯಿಂದ ಕುಂದಾಪುರ ಕಡೆ ಹೋಗುತ್ತಿದ್ದ ಕಾರೊಂದು ಚಾಲಕ ಅತೀವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆದಿದೆ.
ಘಟನೆಯಿಂದ ಗಂಭೀರ ಗಾಯಗೊಂಡ ಮಹಿಳೆ ಸ್ಥಳದಲ್ಲೇ ಮೃತಪಟ್ಟಿರುತ್ತಾರೆ.

ಮೃತ ದೇಹವನ್ನು ಕೋಟ ಜೀವನ್ ಮಿತ್ರ ನಾಗೇಂದ್ರ ಪುತ್ರನ್ ರವರು ಮರಣೋತ್ತರ ಪರೀಕ್ಷೆಗೆ ಕುಂದಾಪುರಕ್ಕೆ ಸಾಗಿಸಿರುತ್ತಾರೆ.

ಘಟನಾಸ್ಥಳಕ್ಕೆ ಕೋಟ ಪೊಲೀಸ್ ಠಾಣೆಯ ಎಎಸ್ಐ ಗೋಪಾಲ್ ಪೂಜಾರಿ, ಸಿಬ್ಬಂದಿ ಅಶೋಕ್ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿ ಕೊಂಡಿದ್ದಾರೆ.