ಡೈಲಿ ವಾರ್ತೆ: 14/ಏಪ್ರಿಲ್/2025

ಹಿರಿಯಡಕ ಗಂಪ ಕ್ರಾಸ್ ಬಳಿ ಭೀಕರ ಅಪಘಾತ – ಓರ್ವ ಸಾವು, ಮತ್ತೋರ್ವ ಗಂಭೀರ

ಉಡುಪಿ: ಖಾಸಗಿ ಬಸ್ ಮತ್ತು ಪಿಕಪ್ ವಾಹನ ನಡುವೆ ನಡೆದ ಭೀಕರ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ, ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ ಸೋಮವಾರ ಸಂಜೆ ಉಡುಪಿ ಸಮೀಪದ ಹಿರಿಯಡಕ ಗಂಪ ಕ್ರಾಸ್ ಬಳಿ ಸಂಭವಿಸಿದೆ.

ಘಟನೆಯಲ್ಲಿ ಪಿಕಪ್ ಸಹಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದರೆ, ಚಾಲಕ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕಾರ್ಕಳದಿಂದ ಉಡುಪಿಗೆ ಹೋಗುತ್ತಿರುವ ಪಿಕಪ್ ಗೆ
ಉಡುಪಿಯಿಂದ ಕಾರ್ಕಳ ಕಡೆ ಹೋಗುತ್ತಿದ್ದ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಪಿಕಪ್ ವಾಹನ ಅಕ್ಷರಶಃ ಇಬ್ಭಾಗವಾಗಿದೆ.

ಹಿರಿಯಡ್ಕ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು ,ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಅಗತ್ಯ ಕ್ರಮ ಕೈಗೊಂಡಿದ್ದಾರೆ.