


ಡೈಲಿ ವಾರ್ತೆ: 18/ಏಪ್ರಿಲ್/2025


ಕೋಟತಟ್ಟು ಗ್ರಾ. ಪಂ. ವ್ಯಾಪ್ತಿಯಲ್ಲಿ ಪ್ರಾ. ಅರೋಗ್ಯ ಕೇಂದ್ರ ನಿರ್ಮಾಣಕ್ಕೆ 14 ಸೆಂಟ್ಸ್ ಜಾಗದ ಅಗತ್ಯ ದಾಖಲೆಯನ್ನು ಅರೋಗ್ಯ ಅಧಿಕಾರಿಗೆ ಸಲ್ಲಿಕೆ

ಕೋಟ: ಕೋಟತಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಡುಕರೆಯಲ್ಲಿ ಈಗಾಗಲೇ ದಾನಿಗಳ ಸಹಕಾರದಿಂದ 14 ಸೆಂಟ್ಸ್ ಜಾಗವನ್ನು ಆರೋಗ್ಯ ಇಲಾಖೆಗೆ ಹಸ್ತಾಂತರಿಸಲಾಗಿದ್ದು ಇಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ನಿರ್ಮಿಸಲು ಆರೋಗ್ಯ ಇಲಾಖೆಯಿಂದ ಅನುದಾನ ಕಾಯ್ದಿರಿಸುವಿರೆ ಜಿಲ್ಲಾ ಆರೋಗ್ಯ ಅಧಿಕಾರಿ ಶ್ರೀ ನಾಗಭೂಷಣ್ ಉಡುಪ ಇವರನ್ನು ಭೇಟಿ ಮಾಡಿ ಅಗತ್ಯ ದಾಖಲೆಯನ್ನು ಸಲ್ಲಿಸಲಾಯಿತು.
ಕೋಟತಟ್ಟು ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಸ್ಥಾಪಿಸುವುದು ಗ್ರಾಮ ಪಂಚಾಯತ್ ಪ್ರಮುಖ ಆಶಯದಲ್ಲಿ ಒಂದಾಗಿದೆ ಎಂದು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಯುತ ಸತೀಶ್ ಕುಂದರ್ ಬಾರಿಕೆರೆ ಅಭಿಪ್ರಾಯ ವ್ಯಕ್ತಪಡಿಸಿದರು.
ಸಂಬಂಧಪಟ್ಟ ಇಲಾಖೆಗೆ ಪ್ರಸ್ತಾವನೆ ಕಳಿಸಲಾಗುವುದೆಂದು ಆರೋಗ್ಯ ಅಧಿಕಾರಿಗಳು ತಿಳಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಸರಸ್ವತಿ ಸದಸ್ಯರಾದ ರವೀಂದ್ರ ತಿಂಗಳಾಯ ಶ್ರೀಮತಿ ಅಶ್ವಿನಿ ಪಂಚಾಯತ ಅಭಿವೃದ್ಧಿ ಅಧಿಕಾರಿ ರವೀಂದ್ರ ರಾವ್ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಮಾಧವ ಪೈ ಆರೋಗ್ಯ ನಿರೀಕ್ಷಕ ಹರೀಶ್ ಇವರು ಉಪಸ್ಥಿತರಿದ್ದರು.