



ಡೈಲಿ ವಾರ್ತೆ: 24/ಏಪ್ರಿಲ್/2025


ಉಗ್ರರ ಗುಂಡಿಗೆ ಬಲಿಯಾದ ಭರತ್ ಭೂಷಣ್ ಅಂತಿಮ ದರ್ಶನ – ಮಗು ಮುಖ ನೋಡಿ ಬಾವುಕಾರದ ಸಿಎಂ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಪಹಲ್ಗಾಮ್‌ನಲ್ಲಿ ಉಗ್ರರಿಂದ ಹತ್ಯೆಯಾದ ನಗರದ ಭರತ್ ಭೂಷಣ್ ಅವರ ಅಂತಿಮ ದರ್ಶನ ಪಡೆದರು.
ಸಿಎಂ ಭೇಟಿಯ ವೇಳೆ, ಮಗುವನ್ನು ತೋರಿಸಿ ಘಟನೆಯ ಭೀಕರತೆಯನ್ನು ಹೇಳಿ ಭರತ್ ಪತ್ನಿ ಸುಜಾತ ಅವರು ಕಣ್ಣಿರಿಟ್ಟರು. ಸಿಎಂ ಮುಂದೆ ಕುಟುಂಬಸ್ಥರು ಬಿಕ್ಕಿ ಬಿಕ್ಕಿ ಅತ್ತಿದ್ದು, ಮಗುವಿನ ಮುಖ ನೋಡಿ ಸಿಎಂ ಸಹ ಭಾವುಕರಾದರು. ಭರತ್ ಪತ್ನಿ, ಸೋದರಮಾವ ಸೀತಾರಾಮ್ ಹಾಗೂ ಭರತ್ ತಂದೆಯವರಿಗೆ ಸಿಎಂ ಸಾಂತ್ವನ ಹೇಳಿದರು.
ಸಿದ್ದರಾಮಯ್ಯ ಅವರ ಜೊತೆ ಸಚಿವ ರಾಮಲಿಂಗಾರೆಡ್ಡಿಯವರು ಸಹ ಭರತ್ ಅವರ ಅಂತಿಮ ದರ್ಶನ ಪಡೆದಿದ್ದಾರೆ.
ಬೆಳಗ್ಗೆ 5:30ರ ವೇಳೆಗೆ ಭರತ್ ಭೂಷಣ್ ಮೃತದೇಹ ಸುಂದರ ನಗರಕ್ಕೆ ಆಗಮಿಸಿತು. ಅಂತಿಮ ದರ್ಶನಕ್ಕೆ ಸಾರ್ವಜನಿಕರಿಗೆ, ಗಣ್ಯರಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಭರತ್ ಭೂಷಣ್ ನಿವಾಸದ ಸುತ್ತ ಬಿಗಿಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಸಿಎಂ ಜೊತೆ ಹಲವು ಗಣ್ಯರು ಆಗಮನ ಹಿನ್ನೆಲೆ ವಿವಿಐಪಿ ದರ್ಶನದ ವ್ಯವಸ್ಥೆ ಕೂಡ ಮಾಡಲಾಗಿದೆ.