ಡೈಲಿ ವಾರ್ತೆ: 25/ಏಪ್ರಿಲ್/2025

ಕೋಟದಲ್ಲಿ ಹಲಸಿನ ಮೇಳಕ್ಕೆ ಭರದ ಸಿದ್ಧತೆ : ಮೇ. 2ರಿಂದ ಹಲಸು, ಮಾವು, ಕೃಷಿ ಮೇಳ

ಕೋಟ: ಸಂಸ್ಕೃತಿ ಸಂಭ್ರಮ ಟ್ರಸ್ಟ್ ಕೋಟ, ಕೋಟ ವಿಧಾತ್ರಿ ರೈತ ಉತ್ಪಾದಕರ ಸಂಸ್ಥೆ, ಗೀತಾನಂದ ಫೌಂಡೇಶನ್ (ರಿ)ಮಣೂರು ಪಡುಕರೆ,
ಕೋಟ ಸಹಕಾರಿ ವ್ಯವಸಾಯಿಕ ಸಂಘದ, ಇದರ ಸಹಭಾಗಿತ್ವ ಹಾಗೂ ಬ್ರಹ್ಮಾವರ ಕೃಷಿ ಸಂಶೋಧನಾ ಕೇಂದ್ರ, ಉಡುಪಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಆಶ್ರಯದಲ್ಲಿ ಕೋಟ ಇತಿಹಾಸದಲ್ಲೇ ಪ್ರಥಮ ಬಾರಿಗೆ ಹಲಸು, ಮಾವು, ಕೃಷಿಮೇಳ ಮೇ. 2ರಿಂದ 4ರವರೆಗೆ ಜರುಗಲಿದೆ.

ಈ ಮೇಳದಲ್ಲಿ ವಿವಿಧ ತಳಿಯ ಹಲಸು, ಮಾವಿನಹಣ್ಣಿನ ಪ್ರದರ್ಶನ ಮತ್ತು ಮಾರಾಟ, ಹಲಸು ಮತ್ತು ಮಾವಿನ ಉಪ ಉತ್ಪನ್ನಗಳ ಮಳಿಗೆ, ವಿವಿಧ ತಳಿಯ ಹಲಸು ಮತ್ತು ಮಾವಿನ ಗಿಡ ಮತ್ತು ಇತರ ಹಣ್ಣಿನ, ಹೂವಿನ, ತರಕಾರಿ ಬೀಜದ ಮಳಿಗೆ ತೆರೆಯಲಾಗುವುದು.
ಅಲ್ಲದೆ ಈ ಬೃಹತ್ ಮೇಳದಲ್ಲಿ ಕೃಷಿ ಯಂತ್ರೋಪಕರಣ, ಗೊಬ್ಬರ ಮಾರಾಟ ನಡೆಯಲಿದ್ದು, ಕೃಷಿ ಮಾಹಿತಿ ಕಾರ್ಯಾಗಾರ, ಕರಕುಶಲ ಮತ್ತು ನೇಯಿಗೆಯ ಬಟ್ಟೆ ಮಳಿಗೆ, ಇತರ ಗೃಹೋಪಯೋಗಿ ವಸ್ತುಗಳ ಮಳಿಗೆಯನ್ನು ಸಹ ತೆರೆಯಲಾಗುವುದ ಎಂದು ಸಂಸ್ಕೃತಿ ಸಂಭ್ರಮ ಟ್ರಸ್ಟ್ ಮುಖ್ಯಸ್ಥರು ಪತ್ರಿಕಾ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ: 9482189216, 8722331786, 9343090686,
9880067821