




ಡೈಲಿ ವಾರ್ತೆ: 29/ಏಪ್ರಿಲ್/2025


ಕರವೇ ಮುಖಂಡ ಸುಜಯ್ ಪೂಜಾರಿ ಹಾಗೂ ಜಿಲ್ಲಾ ಪ್ರಮುಖ ನಾಯಕರು ಸೇರಿದಂತೆ 60 ಕ್ಕೂ ಹೆಚ್ಚು ಕಾರ್ಯಕರ್ತರಿಂದ ಸಾಮೂಹಿಕ ರಾಜೀನಾಮೆ

ಉಡುಪಿ : ಕರ್ನಾಟಕ ರಕ್ಷಣಾ ವೇದಿಕೆಯ ಮಾಜಿ ಜಿಲ್ಲಾಧ್ಯಕ್ಷ ಸುಜಯ್ ಪೂಜಾರಿ ಹಾಗೂ ಜಿಲ್ಲಾ ಪ್ರಮುಖ ನಾಯಕರು ಸೇರಿದಂತೆ 60 ಕ್ಕೂ ಹೆಚ್ಚು ಕಾರ್ಯಕರ್ತರು ನಾರಾಯಣಗೌಡರ ಬಣಕ್ಕೆ ಇಂದು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ.
ಇತ್ತೀಚಿನ ದಿನಗಳಲ್ಲಿ ನಡೆದ ಕೆಲವು ಬೆಳವಣಿಗೆ, ನಾಯಕರು ಹಾಗೂ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಹಠಾತ್ತನೆ ಜಿಲ್ಲಾಧ್ಯಕ್ಷರ ಬದಲಾವಣೆ ಪ್ರಕ್ರಿಯೆ ಮತ್ತು ರಾಜ್ಯದ್ಯಕ್ಷರಾದ ನಾರಾಯಣಗೌಡರ ನಿರ್ಧಾರಗಳು ಸಂಘಟನೆ ಹಾಗೂ ಕಾರ್ಯಕರ್ತರಿಗೆ ಮಾರಕ ಎಂಬುದನ್ನು ಮನಗಂಡು, ನಾನು ಸಂಘಟನೆಯಿಂದ ಬೇಸತ್ತು ನಮ್ಮೊಂದಿಗಿರುವ ಕೆಲವು ಜಿಲ್ಲಾ ನಾಯಕರು ಹಾಗೂ 60ಕ್ಕೂ ಹೆಚ್ಚು ಸಂಘಟನೆಯ ಕಾರ್ಯಕರ್ತರು ಸಂಘಟನೆಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡಿರುತ್ತೇವೆ ಎಂದು ಕರವೇ ಮುಖಂಡ ಸುಜಯ್ ಪೂಜಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.