




ಡೈಲಿ ವಾರ್ತೆ: 30/ಏಪ್ರಿಲ್/2025


ಮೇ 3ರಂದು ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ ಸಾಧ್ಯತೆ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ನಡೆಸಿದ್ದ 2025ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶವನ್ನು ಮೇ 3ರಂದು ಅಧಿಕೃತ ವೆಬ್ಸೈಟ್ನಲ್ಲಿ ಪ್ರಕಟಿಸುವ ಸಾಧ್ಯತೆ ಇದೆ. ಆದರೆ ಈ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಅಧಿಕೃತವಾಗಿ ಘೋಷಣೆ ಮಾಡಿಲ್ಲ. ಸದ್ಯ ಪರೀಕ್ಷೆ ಬರೆದಿರುವ 8 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ.
ಮಾರ್ಚ್ 21 ರಿಂದ ಏಪ್ರಿಲ್ 4 ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆದಿದ್ದವು. ಈಗಾಗಲೇ ಮೌಲ್ಯಮಾಪನ ಕಾರ್ಯ ಮುಕ್ತಾಯವಾಗಿದೆ ಎನ್ನಲಾಗುತ್ತಿದೆ. ಕೆಲ ಸಣಪುಟ್ಟ ಕಾರ್ಯಗಳಿದ್ದು, ಕೂಡಲೇ ಮುಕ್ತಾಯಗೊಳಿಸಿ ಮೇ 3ರಂದು ಫಲಿತಾಂಶ ಪ್ರಕಟಿಸುವ ಸಾಧ್ಯತೆ ಇದೆ.
ರಾಜ್ಯದ 2818 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದ್ದವು. ಪರೀಕ್ಷೆಗೆ 8 ಲಕ್ಷದ 96 ಸಾವಿರ ವಿದ್ಯಾರ್ಥಿಗಳು ನೊಂದಯಿಸಿಕೊಂಡಿದ್ದರು. ಇನ್ನೂ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ ಮಾಡಿ, ವೆಬ್ ಕಾಸ್ಟಿಂಗ್ ವ್ಯವಸ್ಥೆ ಕಲ್ಪಿಸಲಾಗಿತ್ತು.
ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಆನ್‌ಲೈನ್‌ನಲ್ಲಿ ನೋಡುವುದು ಹೇಗೆ?
ಅಧಿಕೃತ ವೆಬ್ಸೈಟ್ಗಳಾದ https://karresults.nic.in/ ಮತ್ತು kseab.karnataka.gov.in ಭೇಟಿ ನೀಡಿ.
ಮುಖಪುಟದಲ್ಲಿರುವ ‘SSLC ಫಲಿತಾಂಶ 2025’ ಲಿಂಕ್ ಅನ್ನು ಕ್ಲಿಕ್ ಮಾಡಬೇಕು.
SSLC ನೋಂದಣಿ ಸಂಖ್ಯೆಯನ್ನು ನಮೂದಿಸಿ ಮತ್ತು ಸಬ್ಮೀಟ್ ಮೇಲೆ ಕ್ಲಿಕ್ ಮಾಡಬೇಕು.
ಬಳಿಕ ವಿಷಯವಾರು ಅಂಕಗಳೊಂದಿಗೆ ಫಲಿತಾಂಶ ಪ್ರದರ್ಶನಗೊಳ್ಳುತ್ತದೆ.
ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.