ಡೈಲಿ ವಾರ್ತೆ: 01/MAY/2025

ಡಿವೈಡರ್​ಗೆ ಕಾರು ಡಿಕ್ಕಿ: ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸ್ತಿದ್ದ ವ್ಯಕ್ತಿ ಸೇರಿ ಮೂವರು ಸಾವು

ಚಿತ್ರದುರ್ಗ: ಚಿತ್ರದುರ್ಗ ತಾಲೂಕಿನ ಕಾತ್ರಾಳ ಗ್ರಾಮದ ಕೆರೆ ಬಳಿ ಡಿವೈಡರ್​ಗೆ ಇನ್ನೋವಾ ಕಾರು ಡಿಕ್ಕಿಯಾಗಿ ತಮಿಳುನಾಡು ಮೂಲದ ಮೂವರು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ.

ಕಾರಿನಲ್ಲಿದ್ದ ಅರ್ಜುನ್(28), ಶರವಣ(31) ಮತ್ತು ಸೇಂದಿಲ್(29) ಮೃತರು. ಘಟನೆ ಸ್ಥಳದಲ್ಲೇ ಓರ್ವ ವ್ಯಕ್ತಿ ಸಾವನ್ನಪ್ಪಿದ್ದರೆ, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಇಬ್ಬರು ಮೃತಪಟ್ಟಿದ್ದಾರೆ.
ಸದ್ಯ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.